ಕರ್ನಾಟಕ CM & DCM ಬಗ್ಗೆ ಮಾತನಾಡದಂತೆ ನಿರ್ದೇಶನ

ಹುಬ್ಬಳ್ಳಿ, ಫೆಬ್ರವರಿ 15: ಕರ್ನಾಟಕ ಬಿಜೆಪಿಯಲ್ಲಿ ಒಂದು ರೀತಿಯ ಬಣ ಬಡಿದಾಟ, ರಾಜ್ಯಾಧ್ಯಕ್ಷ ಬದಲಾವಣೆ ಒಂದೆಡೆಯಾದರೆ, ಆಡಳಿತ ಪಕ್ಷದಲ್ಲೂ ಇಂತದ್ದೆ ಬೆಳವಣಿಗೆ ನಡೆದಿವೆ. ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ (CM) ಹುದ್ದೆ ಹಾಗೂ ಉಪಮುಖ್ಯಮಂತ್ರಿ (DCM) ಡಿಕೆ ಶಿವಕುಮಾರ್ ಅವರ ಕೆಪಿಸಿಸಿ (KPCC) ಹುದ್ದೆ ಬದಲಾವಣೆ ಆಗಾಗ ಚರ್ಚೆಗಳು ನಡೆಯುತ್ತಿವೆ. ಬಣ್ಣ ಬಡಿದಾಟ, ಬಹಿರಂಗ ಹೇಳಿಕೆಗಳ ಮಧ್ಯೆ ಶಾಸಕ ಎನ್.ಹೆಚ್.ಕೊನರೆಡ್ಡಿ ಒಂದಷ್ಟು ಅಪ್ಡೇಟ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಶಾಸಕ ಎನ್‌.ಎಚ್‌ ಕೋನರೆಡ್ಡಿ ಅವರು, ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ನಮಗೆ ಯಾರಿಗೂ ಮಾತನಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ. ಕೇವಲ ಹೈಕಮಾಂಡ್ ಮಾತ್ರ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ.

Congress Highcommond Strictly instructed to Don t Talk on CM and KPCC Posts NH Konareddy

ಪಕ್ಷದ ವಿವಿಧ ನಾಯಕರು, ಪಕ್ಷವನ್ನು ಬಲಪಡಿಸಲು ದೆಹಲಿ ಭೇಟಿ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅದನ್ನು ಮುಖ್ಯಮಂತ್ರಿ ಅಥವಾ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಪ್ರಯತ್ನ ಎಂದು ಬಿಂಬಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಸುಭದ್ರವಾಗಿದ್ದು, ಮುಂದೆಯೂ ಸಹ ನಾವೇ ಅಧಿಕಾರದಲ್ಲಿ ಇರಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Congress Highcommond Strictly instructed to Don t Talk on CM and KPCC Posts NH Konareddy

ಮಹದಾಯಿ ಕಾಮಗಾರಿಗೆ ಅನುಮತಿ ಶೀಘ್ರ?

ಮಹದಾಯಿ ಕಾಮಗಾರಿಗೆ ಕೇಂದ್ರ ವನ್ಯಜೀವಿ ಮಂಡಳಿ ಇನ್ನೆರಡು ತಿಂಗಳಲ್ಲಿ ಅನುಮತಿ ನೀಡುವ ನಿರೀಕ್ಷೆ ಇದೆ. ಈ ವರ್ಷದಲ್ಲಿಯೇ ಕಾಮಗಾರಿ ಆರಂಭಿಸುವ ಗುರಿ ಹೊಂದಲಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಲಾಗಿದೆ. ಅನುಮತಿ ನೀಡದೇ ಹೋದಲ್ಲಿ ನರೇಂದ್ರ- ಗೋವಾ ವಿದ್ಯುತ್ ಲೈನ್ ಮಾಡಲು ಪುನರ್ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂಎಲ್‌ಸಿ ಸಲೀಂ ಅಹ್ಮದ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಥವಾ ಸಿಎಂ ಬದಲಾವಣೆ ಕುರಿತಂತೆ ಸೂಕ್ತ ಸಮಯದಲ್ಲಿ ಎಲ್ಲರೂಂದಿಗೆ ಚರ್ಚಿಸಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ.

ಪಕ್ಷದ ಆಂತರಿಕ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ತಮ್ಮ ತಮ್ಮ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಪಕ್ಷದ ಒಳಗಿನ ಯಾವುದೇ ನಿರ್ಧಾರವನ್ನು ಸಂಚಿವ ಸಂಪುಟ ಪುನರ್ ರಚನೆ ಸೇರಿದಂತೆ ಪಕ್ಷದೊಳಗಿನ ಎಲ್ಲ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಬಂದಾಗ ಎಲ್ಲ ಸಮೂದಾಯಗಳ ಅಭಿಪ್ರಾಯ ಚರ್ಚಿಸಿ ಅದರ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಇಲ್ಲಿಯವರೆಗೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ಪ್ರಮಾಣಿಕವಾಗಿ ನಿಭಾಯಿಸಿದ್ದೇನೆ. ಮುಂದೆಯೂ ಮುಂದುವರೆಸುತ್ತೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+