ಹುಬ್ಬಳ್ಳಿಗೆ ಬಂದಿಳಿದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ

ಹುಬ್ಬಳ್ಳಿ, ಮೇ 6: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.

ಕರ್ನಾಟಕದಲ್ಲಿ ಇದೇ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ. ಕಳೆದ 1 ತಿಂಗಳಿಂದನಿಂದಲೇ ಕಾಂಗ್ರೆಸ್‌ ಎಲ್ಲ ರಾಷ್ಟ್ರೀಯ ನಾಯಕರು ಚುನಾವಣಾ ರಣರಂಗವಾಗಿರುವ ಕರ್ನಾಟಕಕ್ಕೆ ಬಂದು ಪ್ರಚಾರ ಆರಂಭಿಸಿದ್ದರೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬಂದಿರಲಿಲ್ಲ.

Congress leader Sonia Gandhi landed in hubballi

ಆದರೆ ಶನಿವಾರ ಅವರು ಹುಬ್ಬಳ್ಳಿಗೆ ಬಂದಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ ಶುಕ್ರವಾರ ಮೂಲಗಳು ತಿಳಿಸಿದ್ದವು.

ಕಾಂಗ್ರೆಸ್‌ ಪಕ್ಷವು ಯಾವುದೇ ಸೀಟುಗಳನ್ನು ಬಿಟ್ಟುಬಿಡಲು ಬಯಸುವುದಿಲ್ಲ ಎಂದು ಪ್ರಚಾರದ ಯೋಜನೆಯಲ್ಲಿ ಸೋನಿಯಾ ಅವರನ್ನು ಕರೆತರಲಾಗುತ್ತಿದೆ. ಇದುವರೆಗೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಏಪ್ರಿಲ್ 16 ರಿಂದ ರಾಜ್ಯಾದ್ಯಂತ ಸುಮಾರು 60 ರ ರ‍್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ.

Congress leader Sonia Gandhi landed in hubballi

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿಯಲು ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಕರ್ನಾಟಕದ ಲಿಂಗಾಯತ ಮತದಾರರನ್ನು ಸೆಳೆಯಲು ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ (ಕೇಂದ್ರ) ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಈಗ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತದಾರರಲ್ಲಿ ಜಗದೀಶ್‌ ಶೆಟ್ಟರ್‌ ವಿನಂತಿ ಮಾಡಿಕೊಳ್ಳಲಿದ್ದಾರೆ. ಸೋನಿಯಾ ಗಾಂಧಿ ಅವರೊಂದಿಗೆ ರಾಹುಲ್‌ ಗಾಂಧಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟಿದ್ದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಂಜೆ 6 ಗಂಟೆಗೆ ಹುಬ್ಬಳ್ಳಿಯ ಹಾಕಿ ಮೈದಾನದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ರಾಹುಲ್ ಗಾಂಧಿ ಇಂದು ಸಂಜೆ ಹುಬ್ಬಳ್ಳಿಯಲ್ಲಿ ತಮ್ಮ ತಾಯಿಯೊಂದಿಗೆ ಸೇರಿಕೊಳ್ಳಲಿದ್ದಾರೆ. ಹುಬ್ಬಳ್ಳಿ ರ‍್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+