ಕಾಂಗ್ರೆಸ್‌ ನಾಯಕರಿಗೆ ಹೆಚ್ಚಿದ ಒತ್ತಡ: ಟಿಕೆಟ್‌ಗಾಗಿ ಪಟ್ಟು ಹಿಡಿದ ಹುಬ್ಬಳ್ಳಿ ಅಲ್ಪಸಂಖ್ಯಾತ ಮುಖಂಡರು

ಹುಬ್ಬಳ್ಳಿ ಜನವರಿ 19: ವಿಧಾನಸಭಾ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಕೈ ಟಿಕೆಟ್‌ಗಾಗಿ ಅಲ್ಪಸಂಖ್ಯಾತರಿಂದ ಒತ್ತಡ ಹೆಚ್ಚಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಲೇಬೇಕೆಂದು ಪಟ್ಟು ಹಿಡಿದಿರುವ ಅಲ್ಪಸಂಖ್ಯಾತ ನಾಯಕರು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ‌ಮಾಡಿ ಒತ್ತಾಯ ಮಾಡಿದ್ದಾರೆ.

ಬುಧವಾರ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾದ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಮೌಲ್ವಿಗಳು, ಸಮಾಜದ ಮುಖಂಡರನ್ನೊಳಗೊಂಡ ನಿಯೋಗ ಟಿಕೆಟ್‌ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇನ್ನು ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿಯಾದರೂ ಟಿಕೆಟ್‌ ನೀಡಬೇಕೆಂದು ಒತ್ತಾಯ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಮೇಲೆ ಮುಸ್ಲಿಂ ಸಮುದಾಯದ ಕಣ್ಣು ಬಿದ್ದಿದೆ. ಕಳೆದ ವಾರ ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ್ದ ಮುಸ್ಲಿಂ ಸಮುದಾಯದ ಮುಖಂಡರು, ಮೌಲ್ವಿಗಳು,ಸಭೆಯಲ್ಲಿ ಚರ್ಚೆ ಮಾಡಿ ಒಬ್ಬರಿಗೆ ಟಿಕೆಟ್‌ ಪಡೆಯಲೇಬೇಕು, ಈ ನಿಟ್ಟಿನಲ್ಲಿ ಏನೇನೂ ಮಾಡಬೇಕೆಂದು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

Congress Muslim Leaders United for Demanding More Tickets

ಅದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ನ್ನ ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಕೆ‌ ಮಾಡುವ ಮೂಲಕ, ಒಂದು ವೇಳೆ ಟಿಕೆಟ್‌ ನೀಡದೆ ಹೋದರೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್‌ಗೆ ಪೆಟ್ಟು ಬೀಳುವುದು ಖಚಿತ ಎನ್ನುವ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಇದರಿಂದಾಗಿ ಕಾಂಗ್ರೆಸ್‌ ಹೈಕಮಾಂಡಿಗೆ ಟಿಕೆಟ್ ಹಂಚಿಕೆ ಮತ್ತೆ ಕಗ್ಗಂಟಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+