• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟಿಪ್ಪು ಜಯಂತಿ ರದ್ದು : ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

|

ಹುಬ್ಬಳ್ಳಿ, ಜುಲೈ 31 : ಟಿಪ್ಪು ಜಯಂತಿ ರದ್ದು ಮಾಡಿರುವ ವಿಚಾರ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ತೀರ್ಮಾನದ ವಿರುದ್ಧ ಪ್ರತಿಭಟನೆ ನಡೆಸಿದರು.

ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ಪು ಜಯಂತಿ ರದ್ದು: ಹೊಸ ಸರ್ಕಾರದ ಕ್ರಮಕ್ಕೆ ಯಾರು, ಏನಂದ್ರು?ಟಿಪ್ಪು ಜಯಂತಿ ರದ್ದು: ಹೊಸ ಸರ್ಕಾರದ ಕ್ರಮಕ್ಕೆ ಯಾರು, ಏನಂದ್ರು?

ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ನಾಡಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಈ ರೀತಿ ಏಕಾಏಕಿ ಜಯಂತಿ ರದ್ದು ಮಾಡಿರುವುದು ಸರಿಯಲ್ಲ. ಟಿಪ್ಪು ಜಯಂತಿ ರದ್ದು ಪಡಿಸುವ ಮೂಲಕ ಬಿಜೆಪಿ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲುಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲು

ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಸರ್ಕಾರ ಕೂಡಲೇ ಟಿಪ್ಪು ಜಯಂತಿ ಆಚರಣೆ ರದ್ದು ಹಿಂಪಡೆದು ಆಚರಣೆಗೆ ಅವಕಾಶ ನೀಡಬೇಕೆಂದು ಎಂದು ಒತ್ತಾಯಿಸಿದರು.

ಟಿಪ್ಪು ಜಯಂತಿ ರದ್ದು : ಬಿಎಸ್‌ವೈ ವಚನ ಭ್ರಷ್ಟ ಎಂದು ಕಾಂಗ್ರೆಸ್ ಟ್ವೀಟ್ಟಿಪ್ಪು ಜಯಂತಿ ರದ್ದು : ಬಿಎಸ್‌ವೈ ವಚನ ಭ್ರಷ್ಟ ಎಂದು ಕಾಂಗ್ರೆಸ್ ಟ್ವೀಟ್

ಬಿ. ಎಸ್.‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಂಗಳವಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದುಗೊಳಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದರು.

ಬುಧವಾರ ವಿಧಾನಸಭೆಯಲ್ಲಿಯೂ ಟಿಪ್ಪು ಜಯಂತಿ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಬಿಗಿ ಪಟ್ಟು ಹಿಡಿಯಿತು. ಸಿದ್ದರಾಮಯ್ಯ ಅವರು ಈ ವಿಚಾರದ ಬಗ್ಗೆ ಚರ್ಚೆ ಮಾಡಲು ವಿಷಯ ಪ್ರಸ್ತಾಪಿಸಿದರು.

ಚಿಕ್ಕಮಗಳೂರಿಗೆ ಹೋಗುವ ತರಾತುರಿಯಲ್ಲಿದ್ದ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಐದು ನಿಮಿಷ ಕೇಳಿ ಎಂದು ಒತ್ತಾಯಿಸಿದರು. ಟಿಪ್ಪು ಜಯಂತಿ ರದ್ದು ಮಾಡಿದ ಬಗ್ಗೆ ಕಾಂಗ್ರೆಸ್ ಸದಸ್ಯರು ವಿರೋಧ ಮಾಡುತ್ತಲೇ ಇದ್ದರು. ವಿರೋಧದ ಮಧ್ಯೆಯೇ ಯಡಿಯೂರಪ್ಪ ಸಿದ್ಧಾರ್ಥ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ಹೊರಟರು.

English summary
Congress leaders protest at Hubballi against cancellation Tipu Jayanti. Chief Minister B.S.Yediyurappa lead Karnataka government ordered to cancel Tipu Jayanti on July 30, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X