ಸುಮಲತಾ ಜತೆ ರಹಸ್ಯ ಸಭೆ, ದೂರು ಬಂದರೆ ಕ್ರಮ: ಪರಮೇಶ್ವರ್

ಬೆಂಗಳೂರು, ಮೇ 02: ಕಾಂಗ್ರೆಸ್ ಮುಖಂಡರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಜೊತೆ ರಹಸ್ಯ ಸಭೆಯಲ್ಲಿ ಭಾಗವಹಿಸುವ ಬಗ್ಗೆ ದೂರು ಬಂದರೆ ಕೂಡಲೇ ಕ್ರಮಕೈಗೊಳ್ಳುವುದಾಗಿ ಡಿಸಿಎಂ ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಡಿನ್ನರ್ ಡಿಪ್ಲಮಸಿ' ಇತ್ತೀಚೆಗೆ ಹೆಚ್ಚಾಗಿದೆ, ಆದರೆ ಕಾಂಗ್ರೆಸ್‌ನ ಶಿಸ್ತು ಸಮಿತಿ ಈ ರೀತಿಯ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದರು.

ಮೊನ್ನೆ ಬೆಂಗಳೂರಿನ ಹೊಟೆಲ್ ಒಂದರಲ್ಲಿ ಮಂಡ್ಯದ ಕಾಂಗ್ರೆಸ್ ಮುಖಂಡರು ಸುಮಲತಾ ಅವರೊಂದಿಗೆ ಸಭೆ ನಡೆಸಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸಿದೆ.

Congress will take action against leaders who had meeting with Sumalatha: Parameshwar

ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮಾಗಡಿ ಬಾಲಕೃಷ್ಣ, ರವಿ ಗಣಿಗ, ಮಳವಳ್ಳಿ ಶಿವಣ್ಣ, ರಘುವೀರ್ ಗೌಡ ಇನ್ನೂ ಹಲವು ಮುಖಂಡರು ಮೊನ್ನೆ ರಾತ್ರಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಸುಮಲತಾ ಅವರಿಗೆ ಬೆಂಬಲಿಸಿದ್ದ ಎಂಟು ಜನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಈಗಾಗಲೇ ಕೆಪಿಸಿಸಿ ವಜಾ ಮಾಡಿದೆ. ಅವರಿಗೂ ಮೇಲು ಹಂತದ ಕಾಂಗ್ರೆಸ್‌ ಮುಖಂಡರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+