ಅಣ್ಣಿಗೇರಿ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವು
ಅಣ್ಣಿಗೇರಿ, ಏಪ್ರಿಲ್, 21: ಅಣಿಗೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಎಚ್.ಕೋನರಡ್ಡಿ ಹಮ್ಮಿಕೊಂಡಿದ್ದ ಬಹಿರಂಗ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ನಲವಡಿ ಗ್ರಾಮದ ಮುಖಂಡ ದೇವನಗೌಡ ಪಾಟೀಲ (52) ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ.
ದಿ.ಎಸ್.ಎಮ್.ಪಾಟೀಲ ಸಭಾಭವನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಭೆಯನ್ನು ಆಯೋಜಿಸಿಲಾಗಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಸಂಸದ ರಣದೀಪ್‌ಸಿಂಗ್ ಸುರ್ಜೇವಾಲಾ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಉಪಸ್ಥಿತಿಯಲ್ಲಿ ಈ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಇದೇ ಮೊದಲ ಬಹಿರಂಗ ಪ್ರಚಾರವನ್ನು ಹಮ್ಮಿಕೊಂಡಿರುವದು ವಿಶೇಷವಾಗಿತ್ತು. ದುರದೃಷ್ಟವಶಾತ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಭೆಯಲ್ಲಿ ಇಂತಹ ದುರ್ಘಟನೆ ಸಂಭವಿಸಿದೆ.












Click it and Unblock the Notifications