Breaking; ವಿವಾದಿತ ಪೋಸ್ಟ್, ಹುಬ್ಬಳ್ಳಿಯಲ್ಲಿ ಯುವಕ ವಶಕ್ಕೆ
ಹುಬ್ಬಳ್ಳಿ, ಮೇ 08; ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬೆಂಡಿಗೇರಿ ಠಾಣೆ ವ್ಯಾಪ್ತಿಯ ಯುವಕ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕೇಶ್ವಾಪುರದ ಯುವಕನೊಬ್ಬ ಲವ್ ಜಿಹಾದ್ ವಿಚಾರದಲ್ಲಿ ಹಾಕಿರುವ ಪೋಸ್ಟ್ ಹಾಕಿ ವಿವಾದಕ್ಕೆ ಕಾರಣವಾಗಿದೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಡಿಗೇರಿ ಯುವಕ ಹಾಗೂ ಆನಂದನಗರ ಯುವತಿಯ ಕುರಿತು ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕಿದ ಆರೋಪದ ಮೇಲೆ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಬೆಂಡಿಗೇರಿ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದ.

ಯುವಕ ಮತ್ತು ಯುವತಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರು. ಇವರ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಬೆಂಡಿಗೇರಿ ಠಾಣೆ ವ್ಯಾಪ್ತಿಯ ಯುವಕ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಗಲಭೆ ನಡೆದಿತ್ತು; ಏಪ್ರಿಲ್ ತಿಂಗಳಿನಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಪ್ರಚೋದನಾಕಾರಿ ವಾಟ್ಸಪ್ ಸ್ಟೇಟಸ್ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಈಗ ಪೋಸ್ಟ್ ಹಾಕಿದ ಯುವಕನನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ.












Click it and Unblock the Notifications