ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

|
Google Oneindia Kannada News

ಹುಬ್ಬಳ್ಳಿ, ಏಪ್ರಿಲ್ 24: ಕೊರೊನಾ ವಿರುದ್ದ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಧಾರವಾಡ ಕಲಾವಿದ ಮಂಜುನಾಥ್ ಹಿರೇಮಠ ನಿರ್ಮಿಸಿರುವ ಮರಳು ಶಿಲ್ಪ ಗಮನ ಸೆಳೆದಿದೆ.

ಈ ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದರು.

ಹಿರಿಯ ಪೊಲೀಸ್ ಅಧಿಕಾರಿ ಮುರುಗನ್ ಮೇಲೆ ಗಂಭೀರ ಆರೋಪಹಿರಿಯ ಪೊಲೀಸ್ ಅಧಿಕಾರಿ ಮುರುಗನ್ ಮೇಲೆ ಗಂಭೀರ ಆರೋಪ

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು,‌ ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೋನಾ ಸೊಂಕಿತರು ಹಾಗೂ ಪ್ರಾಥಮಿಕ ಹಂತದಲ್ಲಿ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೊರದು ಕೋವಿಡ್-19 ರೋಗಿಗಳ ಚಿಕಿತ್ಸೆ ಮಾಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ಕೋವಿಡ್-19 ರೋಗಿಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Corona: Sand Art Tribute For Corona Warriors In Hubballi

ಧಾರವಾಡ ಜಿಲ್ಲಾಡಾಳಿತ, ಪೊಲೀಸ್ ಇಲಾಖೆ, ಪಾಲಿಕೆ‌ಯ ಪೌರಕಾರ್ಮಿಕರು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ‌. ಇವರ ಕಾರ್ಯಕ್ಕೆ ಇತರೆ ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು ಕೈ ಜೋಡಿಸಿದ್ದಾರೆ. ಮಾಧ್ಯಮವರು ಕೊರೋನಾ ವಿರುದ್ದ ಹೋರಾಟದಲ್ಲಿ ಸಕ್ರಿಯವಾಗಿವ ಭಾಗವಹಿಸಿ ಜನರಲ್ಲಿ‌ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು‌ ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಹೇಳಿದರು.

English summary
Corona: Sand Art Tribute For Corona Warriors In Hubballi. artist manjunath hiremath done it. and jagadish shettar apriciate it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X