ಲಾಕ್‌ಡೌನ್; ಹುಬ್ಬಳ್ಳಿಯಲ್ಲಿ ನಡೆಯಿತು ಪೊಲೀಸರ ಮೇಲೆ ಕಲ್ಲು ತೂರಾಟ

ಹುಬ್ಬಳ್ಳಿ, ಏಪ್ರಿಲ್ 3: ಲಾಕ್ ಡೌನ್ ನಡುವೆಯೂ ನಮಾಜ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು ಪೊಲೀಸರ ಮೇಲೆ‌ ಕಲ್ಲು ತೂರಾಟ ನಡೆಸಿದ ಘಟನೆ ಮಂಟೂರ್ ರಸ್ತೆ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ಶುಕ್ರವಾರ ನಡೆದಿದೆ.

Recommended Video

      ಮೂಕ ಪ್ರಾಣಿಗಳಿಗೆ ನೇರವಾದ ಕನ್ನಡದ ಯುವಕರು | Oneindia Kannada

      ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರ ಹಾಗೂ ಮುಸ್ಲಿಂರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಕೆ ಸ್ಥಳೀಯ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ.

      ಮೂರು ಜನ ಪೊಲೀಸ್ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೇ ಈ ಸಂದರ್ಭದಲ್ಲಿ ಮಸೀದಿಯಲ್ಲಿ ಪ್ರಾರ್ಥನಾ ಮಾಡಲು ಮುಂದಾದ 20ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದವರಿಗೆ ಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಪೊಲೀಸರ ಮೇಲೆ ಚಪ್ಪಲಿ ಕೂಡ ತೂರಿದ್ದಾರೆ.

      Coronavirus In Hubballi: Stone Pelting On Police In Hubballi

      ಎಂಟು ಜನರನ್ನು ವಶಕ್ಕೆ ಪಡೆದ ಶಹರ ಠಾಣೆ ಪೊಲೀಸ್‌ ಅಧಿಕಾರಿಗಳು ಪರಾರಿಯಾದವರಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.‌ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲೊ ನಿಯೋಜಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+