Karnataka Budget 2024: ನಾಳಿನ ಸಿಎಂ ಬಜೆಟ್ ಮಂಡನೆ ಬಗ್ಗೆ ಡಿಸಿಎಂ ಹೇಳಿದ್ದೇನು?

ಹುಬ್ಬಳ್ಳಿ, ಫೆಬ್ರವರಿ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಶುಕ್ರವಾರ ಫೆಬ್ರವರಿ 16ರಂದು ಬಹುನಿರೀಕ್ಷೆಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದೊಂದು ಆಶಾದಾಯಕ ಆಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೊಂದು ಆಶಾದಾಯಕ ಆಗಿರಲಿದೆ. ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಸಾಕಾರಕ್ಕೆ ಆದ್ಯತೆ ನೀಡಲಾಗಿದೆ. ಈಗಲೇ ಬಜೆಟ್ ನಲ್ಲಿ ಏನೇನಿರಲಿದೆ ಎಂದು ಹೇಳಲು ಆಗುವುದಿಲ್ಲ. ಎಲ್ಲವು ಗುರುವಾರ ತಿಳಿಯಲಿದೆ ಎಂದು ಅವರು ಹೇಳಿದರು.

DCM DK Shivakumar Reaction About Karnataka Budget 2024

ಜನರ ಯೋಜನೆ ರೂಪಿಸಿರುವ ಸರ್ಕಾರದ ಈ ಬಜೆಟ್ ಬಹುಶಃ ನಮ್ಮ ರಾಜ್ಯಕ್ಕೆ ಒಂದು ಹೊಸ ದಿಕ್ಸೂಚಿ ಕೊಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜನರ ನಂಬಿಕೆ ಉಳಿಸಿದ್ದೇವೆ

ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದರಂತೆ ನಾವು ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ಮಾಡಿದ್ದೇವೆ. ಹೇಗೆ ಈ ಐದು ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನಷ್ಠಾನಗೊಳಿಸಿದೆವೋ ಅದೇ ರೀತಿ ನಾಡಿನ ಜನರ ಬದುಕಿಗೆ ಶಕ್ತಿ ತುಂಬಲು ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

DCM DK Shivakumar Reaction About Karnataka Budget 2024

ಟಿಕೆಟ್ ಫೈನಲ್ ಬಗ್ಗೆ ಹೈಕಮಾಂಡ್ ತೀರ್ಮಾನ

ಇದಲ್ಲದೆ ರಾಜ್ಯದ ಜನತೆಗಾಗಿ ಆನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬಜೆಟ್ ಮಂಡನೆ ಆಗಲಿದೆ.

ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ವಿಚಾರ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಯಾವ ಕ್ಷೇತ್ರಗಳ ಟಿಕೆಟ್ ಯಾರಿಗೆ ಕೊಡಬೇಕು, ಫೈನಲ್ ಮಾಡಬೇಕು ಎಂಬದನ್ನು ಸಮೀಕ್ಷೆ ಆಧಾರದಲ್ಲಿ ತೀರ್ಮಾಣವಾಗಲಿದೆ. ಇದು ವ್ಯಕ್ತಗತಿವಾಗಿ ತೀರ್ಮಾನ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ದುರುಪಯೋಗ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆ, ಆ ರೀತಿ ಏನು ಆಗುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ಮಹದಾಯಿ ಯೋಜನೆಗೆ ಕೇಂದ್ರ ಸಹಕರಿಸುತ್ತಿಲ್ಲ

ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಮಹದಾಯಿ ಯೋಜನೆ ಜಾರಿ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಯೋಜನೆ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ. ಕೇಂದ್ರ ಸರ್ಕಾರ ಸರಿಯಾಗಿ ಸಹಕಾರ ಕೊಡುತ್ತಿಲ್ಲ. ಯೋಜನೆ ಸಲುವಾಗಿ ಟೆಂಡರ್ ಸಹ ಕರೆಯಲಾಗಿದೆ ಎಂದು ಅವರು, ಇಂದಿನ ನನ್ನ ಹುಬ್ಬಳ್ಳಿ ಭೇಟಿ ಖಾಸಗಿ ಕಾರ್ಯಕ್ರಮದ ಭಾಗವಾಗಿಯ. ಕುಟುಂಬಸ್ಥರಲ್ಲಿ ಒಬ್ಬರು ಮದುವೆ ಇತ್ತು. ಅದರಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ್ದೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+