Arvind Kejriwal :ಕರ್ನಾಟಕದಲ್ಲಿ ಖಾತೆ ತೆಗೆಯಲು ಆಪ್ ಭರ್ಜರಿ ಪ್ಲಾನ್: ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕದಲ್ಲಿಯೂ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಮ್ ಆದ್ಮಿ ಪಕ್ಷ ಭರ್ಜರಿ ಪ್ಲಾನ್ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ಹುಬ್ಬಳ್ಳಿ, ಮಾರ್ಚ್ 4: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚುಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ, ಹೈಕಮಾಂಡ್ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಯಾತ್ರೆ ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದರೆ, ಆಮ್ ಆದ್ಮಿ ಪಕ್ಷ ಕೂಡ ಭರ್ಜರಿ ಪ್ರಚಾರ ಆರಂಭಿಸಿದೆ.
ಕರ್ನಾಟಕದಲ್ಲಿಯೂ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಮ್ ಆದ್ಮಿ ಪಕ್ಷ ಭರ್ಜರಿ ಪ್ಲಾನ್ ರೂಪಿಸಿದೆ. ಹೀಗಾಗಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಆಪ್ ಮುಖಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಭಗವಂತ ಮಾನ್ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಇದೇ ಮೊದಲ ಬಾರಿಗೆ ಆಗಮಿಸಿದ ಉಭಯ ನಾಯಕರಿಗೆ ವಾಣಿಜ್ಯ ನಗರಿಗೆ ಆಪ್ ನಾಯಕರು ಅದ್ಧೂರಿಯಾಗಿ ಸ್ವಾಗತ ನೀಡಿದರು. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಹುಬ್ಬಳ್ಳಿಯಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದಾರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಆಪ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಅರವಿಂದ್ ಕೇಜ್ರಿವಾಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದ ಮಧ್ಯ ಭಾಗದಿಂದಲೇ ಪಕ್ಷ ಸಂಘಟನೆಗೆ ಅರವಿಂದ ಕೇಜ್ರಿವಾಲ್ ಮುಂದಾಗಿದ್ದಾರೆ.

ದಾವಣಗೆರೆಯಲ್ಲಿ ನಡೆಯುವ ಬ್ಲಾಕ್ ಸದಸ್ಯರ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಲಿದ್ದಾರೆ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ.
ದಾವಣಗೆರೆ ಕಾರ್ಯಕ್ರಮಕ್ಕೂ ಮುಂಚೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಲಿರುವ ಅರವಿಂದ್ ಕೇಜ್ರಿವಾಲ್ ಪಕ್ಷದ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಖಾಸಗಿ ಹೋಟೆಲ್‌ನಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಖಾತೆ ಓಪನ್ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದು ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.












Click it and Unblock the Notifications