ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶತಮಾನ ಪೂರೈಸಿದ ಸರ್ಕಾರಿ ಶಾಲೆ; ಸೀಟುಗಳಿಗೆ ಭಾರೀ ಬೇಡಿಕೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮೇ25: ಲಕ್ಷಾಂತರ ಹಣ ನೀಡಿ ಖಾಸಗಿ ಶಾಲೆಯಲ್ಲಿ ತಮ್ಮ ಮಕ್ಕಳನ್ನು ಓದಿಸಬೇಕು ಎಂಬ ಆಲೋಚನೆ ಬದಲಾಗುತ್ತಿದೆ. ಅದಕ್ಕೆ ಉದಾಹರಣೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಿಡನಾಳದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್).

ಈ ಶಾಲೆಯಲ್ಲಿ ಬಹಳ ವರ್ಷದ ಹಿಂದಿನಿಂದಲೂ ದಾಖಲಾತಿಗೆ ಬೇಡಿಕೆ ಇದೆ. ಕಾರಣ ಈ ಶಾಲೆಯಲ್ಲಿರುವ ಶೈಕ್ಷಣಿಕ ವ್ಯವಸ್ಥೆ ಎಲ್ಲರೂ ಮೆಚ್ಚುವಂತದ್ದು. ಶೈಕ್ಷಣಿಕ ಚಟುವಟಿಕೆಯಲ್ಲಿ ವಿಶೇಷತೆಗಳಿಂದಲೇ ಧಾರವಾಡ ಜಿಲ್ಲೆಯಲ್ಲಿ ಗಮನಸೆಳೆದಿರುವ ಬಿಡನಾಳದ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ದಾಖಲಾತಿ ಮಾಡಿಸಲು ಪಾಲಕರು ಮುಗಿಬಿದ್ದಿದ್ದಾರೆ.

ಪರಿಣಾಮ ಈ ವರ್ಷದ ತರಗತಿಗೆ ವಿದ್ಯಾರ್ಥಿಗಳಿಗೆ ಲಾಟರಿ ಮೂಲಕ ಸೀಟುಗಳನ್ನು ನೀಡಲಾಗಿದೆ. ಹೌದು, ಈ ಶಾಲೆಯಲ್ಲಿರುವ ಶೈಕ್ಷಣಿಕ ವ್ಯವಸ್ಥೆ ಎಲ್ಲರೂ ಮೆಚ್ಚುವಂತದ್ದು. ಅದನ್ನು ಶಾಲೆಯ ದಾಖಲೆಗಳು ಸಾಕ್ಷೀಕರಿಸುತ್ತವೆ. ಶಾಲೆಯ ಕಪೌಂಡ್​ಗೆ ಲೇಪಿಸಿದ ಬಣ್ಣ, ಬರೆದ ಬರಹಗಳು, ಚಿತ್ರಗಳು ಆಕರ್ಷಿಸುತ್ತವೆ. ಜೊತೆಗೆ ಶಾಲೆಯ ಕಟ್ಟಡಗಳು ಬಣ್ಣದಿಂದ ಕಂಗೊಳಿಸುತ್ತಿವೆ.

v

ಶಾಲೆಯ ಸುಸಜ್ಜಿತ ಕೊಠಡಿ, ಸಮೃದ್ದ ಕ್ರೀಡಾಂಗಣ, ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಕ್ಲಾಸ್, ಲ್ಯಾಬ್ ಸೇರಿದಂತೆ ಮಕ್ಕಳ ಸಮೃದ್ಧ ಜೀವನಕ್ಕೆ ಅಡಿಪಾಯ ಹಾಕಲು ಬೇಕಾದ ಎಲ್ಲ ಸೌಲಭ್ಯಗಳನ್ನು ಈ ಸರ್ಕಾರಿ ಶಾಲೆ ಒಳಗೊಂಡಿದೆ. ಪರಿಣಾಮ ಪೋಷಕರು ತಮ್ಮ ಮಕ್ಕಳನ್ನು ಪ್ರತಿಷ್ಠಿತ ಖಾಸಗಿ ಶಾಲೆಗಳಿಂದ ಮಕ್ಕಳನ್ನು ಬಿಡಿಸಿ ಈ ಶಾಲೆಯಲ್ಲಿ ದಾಖಲಾತಿ ಮಾಡಿಸುತ್ತಿದ್ದಾರೆ.

Demand for Enrollment at Bidanala Govt School Hubballi

ಲಾಟರಿ ಮೂಲಕ ಮಕ್ಕಳಿಗೆ ಪ್ರವೇಶಾತಿ ಪ್ರಕ್ರಿಯೆ; ಕೆಲವರಂತೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆ ದಾಖಲಾತಿಗಾಗಿ ಶಿಫಾರಸನ್ನು ಮಾಡಿಸುತ್ತಿದ್ದಾರೆ. ಸದ್ಯ ಈ ಶಾಲೆಯಲ್ಲಿ ಒಟ್ಟು 1000 ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 7 ನೇ ತರಗತಿವರೆಗೆ 847 ವಿದ್ಯಾರ್ಥಿಗಳಿದ್ದು, 1 ನೇ ತರಗತಿ (ಕನ್ನಡ ಮಾಧ್ಯಮ) ಗೆ ಈಗಾಗಲೇ 60 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಎಲ್‌ಕೆಜಿ, ಯುಕೆಜಿ ಮತ್ತು ಆಂಗ್ಲ ಮಾಧ್ಯಮ ತರಗತಿಗಳಿಗೆ ಸಾಕಷ್ಟು ಅರ್ಜಿಗಳು ಬಂದಿವೆ. ಇದರಿಂದಾಗಿ ಪ್ರತಿ ತರಗತಿಗೆ 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು ಶಾಲಾ ಆಡಳಿತ ಮಂಡಳಿಗೆ ತಲೆನೋವಾಗಿದೆ. ಹೀಗಾಗಿಯೇ ಲಾಟರಿ ಮೂಲಕ ಮಕ್ಕಳಿಗೆ ಪ್ರವೇಶಾತಿ ನೀಡುವ ಕೆಲಸವನ್ನು ಶಾಲಾ ಆಡಳಿತ ಮಂಡಳಿ ಮಾಡಿದೆ.

ಮತ್ತೊಂದು ವಿಭಾಗ ತೆರೆಯಲು ಅವಕಾಶ; ಇನ್ನು 1913ರಲ್ಲಿ ಪ್ರಾರಂಭವಾದ ಈ ಶಾಲೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದರು. ಇಲ್ಲಿನ ಶಿಕ್ಷಣ ವ್ಯವಸ್ಥೆ ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾಗುತ್ತಾ ಸಾಗಿತ್ತು. ಪರಿಣಾಮವೇ ಪ್ರಸ್ತುತ 1000 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುವಂತಾಗಿದೆ. ಇನ್ನು ಎಲ್‌ಕೆಜಿ, ಯುಕೆಜಿಗೆ ದಾಖಲಾತಿ ಸಂಖ್ಯೆ ಹೆಚ್ಚಿಸುವಂತೆ ಪೋಷಕರು ದುಂಬಾಲು ಬಿದಿದ್ದಾರೆ. ಶಾಲಾ ಆಡಳಿತ ಮಂಡಳಿಯು ಸರ್ಕಾರಕ್ಕೆ ಮತ್ತೊಂದು ವಿಭಾಗ ತೆರೆಯಲು ಅವಕಾಶಕ್ಕೆ ಅನುಮತಿ ಕೋರಿದೆ.

ಉತ್ತಮ ಫಲಿತಾಂಶದ ಸಾಧನೆ; ಕರ್ನಾಟಕ ಪಬ್ಲಿಕ್ ಸ್ಕೂಲ್ ಎಸ್ಸೆಸ್ಸೆಲ್ಸಿಯಲ್ಲಿಯೂ ಉತ್ತಮ ಫಲಿತಾಂಶದ ಸಾಧನೆ ಮಾಡಿದೆ. ಈ ಶಾಲೆಗೆ ಶಿಕ್ಷಕರೇ ದೊಡ್ಡ ಶಕ್ತಿ. ಪ್ರತಿಯೊಬ್ಬರೂ ಮಕ್ಕಳ ಕಲಿಕೆಗೆ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ತಮ್ಮ ವಿಷಯದಲ್ಲಿ ಹೆಚ್ಚಿನ ಅಂಕ ಪಡೆದುಕೊಳ್ಳುವಂತೆ ತರಬೇತಿ ನೀಡುತ್ತಾರೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ತರಗತಿ ಮೂಲಕ ಪರೀಕ್ಷೆಗೆ ಸಜ್ಜುಗೊಳಿಸುತ್ತಾರೆ. ಖಾಸಗಿ ಶಾಲೆಗಳಿಂತಲೂ ಕಡಿಮೆ ಇಲ್ಲವೆಂಬಂತೆ ಪಾಲಕರ ಸಹಕಾರದೊಂದಿಗೆ ವಾರ್ಷಿಕೋತ್ಸವ ಆಚರಣೆ ಮಾಡಲಾಗುತ್ತದೆ.

ಒಟ್ಟಾರೆ, ಶಿಕ್ಷಣದ ಹೆಸರಿನಲ್ಲಿ ಲಕ್ಷ ಲಕ್ಷ ಪೀಕುವ ಖಾಸಗಿ ಸ್ಕೂಲ್ ಗಳಿಗೆ , ಬಿಡನಾಳದ ಸರ್ಕಾರಿ ಪಬ್ಲಿಕ್ ಸ್ಕೂಲ್ ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ.

Recommended Video

Virat Kohli ಕ್ಯಾಪ್ಟನ್ ಆದಾಗ ಏನ್ ಮಾಡಿದ್ರು ಗೊತ್ತಾ! | #cricket | Oneindia Kannada

English summary
Demand for enrollment At Bidanala government school at Hubballi. School completed 100 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X