ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಡ ಶ್ರೀಗಳ ಹೆಸರಿಡಲು ಒತ್ತಾಯ

ಹುಬ್ಬಳ್ಳಿ, ಜನವರಿ 02: ಇತ್ತೀಚಿಗೆ ಮೇಲ್ದರ್ಜೆಗೇರಿದ ಹುಬ್ಬಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಡ ಶ್ರೀಗಳ ಹೆಸರಿಡಲು ಒತ್ತಾಯಿಸಿ, ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರಸಿದ್ಧ ಸಿದ್ಧಾರೂಢ ಮಠದ ಆಡಳಿತ ಮಂಡಳಿಯಿಂದ ಪತ್ರಿಕಾಗೋಷ್ಠಿ ನಡೆಸಿ, ಸಿದ್ಧಾರೂಡ ಶ್ರೀಗಳು ಈ ಭಾಗದ ದೈವವಾಗಿದ್ದು ಅವರ ಹೆಸರನ್ನು ಅಜರಾಮರ ಗೊಳಿಸುವ ಸಲುವಾಗಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಡ ಶ್ರೀಗಳ ಹೆಸರಿಡಬೇಕು ಎಂದು ಮನವಿ ಮಾಡಿದರು.

Demand for Hubli Airport should be name after Sidharooda Shri

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಇದೇ ಜನವರಿ 4ರಂದು ಶ್ರೀ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಬ್ರಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರು, ಹಲವು ಮಠಾಧೀಶರು,ನಾಗರಿಕರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜನವರಿ 04 ರಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ ಎಂದು ಸಿದ್ಧಾರೂಡ ಮಠದ ಆಡಳಿತ ಮಂಡಳಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+