ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ : ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಿ

By Gururaj
|
Google Oneindia Kannada News

ಹುಬ್ಬಳ್ಳಿ, ಜುಲೈ 03 : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರಿಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಧಾರವಾಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೌಂಡೇಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಒತ್ತಾಯ ಕೇಳಿಬಂದಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣನವರ ಅವರು ಈ ಕುರಿತು ಒತ್ತಾಯಿಸಿದ್ದಾರೆ.

 ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಿ

'ಶಕ್ತಿ, ಧೈರ್ಯ ಸಾಹಸಕ್ಕೆ ಹೆಸರಾಗಿರುವ ರಾಯಣ್ಣ ಅವರ ಹೆಸರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇಡಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರಿಡಬೇಕು ಎಂದು' ಶಿವಾನಂದ ಅವರು ಆಗ್ರಹಿಸಿದ್ದಾರೆ.

Demand to name Hubballi airport after Sangolli Rayanna

'ದೇಶದ ರಕ್ಷಣೆ ಮತ್ತು ಕೀರ್ತಿಗಾಗಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚನ್ನಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡಿದ್ದಾರೆ. ಅವರ ಹೆಸರು ಅಜರಾಮರವಾಗಿ ಉಳಿಯಲು ವಿಮಾನ ನಿಲ್ದಾಣಗಳಿಗೆ ಹೆಸರಿಡಬೇಕು' ಎಂದು ಒತ್ತಾಯಿಸಿದ್ದಾರೆ.

2017ರ ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದ್ದರು.

ಹುಬ್ಬಳ್ಳಿ : ಬೆಂಗಳೂರು, ಚೆನ್ನೈ, ಅಹಮದಾಬಾದ್‌ಗೆ ವಿಮಾನ ಸೇವೆ ಆರಂಭಹುಬ್ಬಳ್ಳಿ : ಬೆಂಗಳೂರು, ಚೆನ್ನೈ, ಅಹಮದಾಬಾದ್‌ಗೆ ವಿಮಾನ ಸೇವೆ ಆರಂಭ

ಹುಬ್ಬಳ್ಳಿ ವಿಮಾನ ನಿಲ್ದಾಣ ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಮಾನ ನಿಲ್ದಾಣವಾಗಿದೆ. ರನ್‌ ವೇಯನ್ನು ವಿಸ್ತರಣೆ ಮಾಡಿ, ಹೊಸ ಟರ್ಮಿನಲ್ ನಿರ್ಮಾಣ ಮಾಡಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿದೆ.

English summary
Krantiveera Sangolli Rayanna Foundation demand the Union and Karnataka government to name the Hubballi airport after Sangolli Rayanna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X