ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೋವಿನಲ್ಲಿ ಕಣ್ಣೀರಿಡುತ್ತಲೇ sslc ಪರೀಕ್ಷೆ ಬರೆದ ಸಚಿವ ಶಿವಳ್ಳಿ ಮಗಳು

|
Google Oneindia Kannada News

ಹುಬ್ಬಳ್ಳಿ, ಮಾರ್ಚ್ 23: ಶುಕ್ರವಾರ ಹೃದಯಾಘಾತದಿಂದ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಎರಡನೆಯ ಮಗಳು ರೂಪಾ, ತಂದೆಯ ಅಗಲಿಕೆಯ ದುಃಖದ ನಡುವೆಯೇ ಕಣ್ಣೀರಿಡುತ್ತಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ.

ಸಿ.ಎಸ್. ಶಿವಳ್ಳಿ ಅವರ ಮಗಳು ಎರಡನೆಯ ಪುತ್ರಿ ರೂಪಾ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಕೆಎಲ್‌ಇ ಕಾಲೇಜಿನಲ್ಲಿ 10ನೇ ತರಗತಿ ಓದುತ್ತಿದ್ದಾರೆ.

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ

ತಂದೆ ಸಾವಿನ ನೋವು ಒಂದೆಡೆ ಅತೀವ ದುಃಖ ಉಂಟುಮಾಡುತ್ತಿದ್ದರೂ, ಶಿಕ್ಷಣಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ಅವರು ಅಳುತ್ತಲೇ ಪರೀಕ್ಷೆ ಬರೆದಿದ್ದಾರೆ. ಇಲ್ಲಿನ ಸೇಂಟ್ ಆಂಟೋನಿ ಶಾಲೆಯಲ್ಲಿ ಹತ್ತನೇ ತರಗತಿಯ ಸಿಬಿಎಸ್‌ಇ ಇಂಗ್ಲಿಷ್ ಭಾಷೆಯ ಪರೀಕ್ಷೆಯನ್ನು ಬರೆದರು. ಪರೀಕ್ಷೆ ಮುಗಿಸಿ ಬಳಿಕ ಅವರು ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Demised minister CS Shivalli daughter writes exam with tears

ಪೌರಾಡಳಿತ ಸಚಿವ ವಿಎಸ್ ಶಿವಳ್ಳಿ (57) ಗುರುವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಮಾತನಾಡುತ್ತ ಕುಳಿತಿದ್ದ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ಕರೆತರಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದರು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ನೆರವೇರಲಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಧ್ಯಾಹ್ನ 3.30ರ ವೇಳೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

English summary
Second daughter of demised Minister CS Shivalli writes SSLC exam in Hubli with tears.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X