'ಅಯ್ಯರನಂತೆ ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಿಂದ ಉಚ್ಛಾಟಿಸಲಿ'

ಹುಬ್ಬಳ್ಳಿ, ಡಿಸೆಂಬರ್ 9: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಕ್ಕೆ ಮಣಿಶಂಕರ ಅಯ್ಯರ್‌ ಅವರನ್ನು ಉಚ್ಛಾಟಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಉಚ್ಚಾಟಿಸಲಿ ಎಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ''ನರೇಂದ್ರ ಮೋದಿ ಅವರನ್ನು ನೀಚ ಎಂದು ನಿಂದಿಸಿದ್ದ ಮಣಿಶಂಕರ ಅಯ್ಯರ್‌ ಅವರನ್ನು ಉಚ್ಚಾಟಿಸಿದಂತೆ ಮೋದಿಯವರನ್ನು ನರಹಂತಕ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಲಿ ಎಂದು ಅಗ್ರಹಿಸಿದರು.

derogatory remarks: Congress should suspend CM Siddaramaiah like Aiyar says, Pralhad Joshi

2014, ಮಾ.23ರಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ಪ್ರಧಾನಿ ಅಭ್ಯರ್ಥಿ "ನರೇಂದ್ರ ಮೋದಿ ಒಬ್ಬ ನರಹಂತಕ" ಎಂದು ಟೀಕಿಸಿದ್ದರು.

ಗುಜರಾತ್ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಮಣಿಶಂಕರ್ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ' ಎಂದು ಕರೆದಿದ್ದಲ್ಲದೆ 'ಸಭ್ಯತೆ' ಇಲ್ಲದವನು ಎಂದು ಹೇಳಿದ್ದರು. ಈ ಬಗ್ಗೆ ಭಾರಿ ಟೀಕೆಗಳು ವ್ಯಕ್ತವಾಗಿತ್ತು.

ಈ ಹಿನ್ನೆಯಲ್ಲಿ ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಪಕ್ಷದಿಂದ ಅಮಾನತು ಮಾಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+