ಹುಬ್ಬಳ್ಳಿಯಲ್ಲಿ ಪ್ರಧಾನ ಮಂತ್ರಿ 'ಉಜ್ವಲ' ಯೋಜನೆಗೆ ಚಾಲನೆ

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಜೂನ್ 18 : ಹೊಗೆ ರಹಿತ ಆರೋಗ್ಯ ಪೂರ್ಣ ಅಡುಗೆ ಮನೆಗಳನ್ನು ಹೊಂದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ 'ಉಜ್ವಲ' ಯೋಜನೆಗೆ ಕೇಂದ್ರ ಪೆಟ್ರೋಲಿಯಂ, ಪ್ರಾಕೃತಿಕ ಅನಿಲ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಇಲ್ಲಿ ಚಾಲನೆ ನೀಡಿದರು.

ಇಲ್ಲಿನ ನೆಹರೂ ಮೈದಾನದಲ್ಲಿ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ವಿತರಿಸಿ ಅವರು ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, 'ಹೊಗೆ ರಹಿತ ಒಲೆ, ಆರೋಗ್ಯದಾಯಕ ಅಡುಗೆ ಮನೆಗಳನ್ನು ಪ್ರತಿ ಕುಟುಂಬವೂ ಹೊಂದಬೇಕೆಂಬ ಸದಾಶಯದೊಂದಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ 'ಉಜ್ವಲ' ಯೋಜನೆ ಅನುಷ್ಠಾನಗೊಳಿಸಿದ್ದು, ಈಗಾಗಲೇ ಕಳೆದ 3 ವರ್ಷಗಳಲ್ಲಿ 7 ಕೋಟಿ ಅಡುಗೆ ಅನಿಲ ರಹಿತ ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಎಂದರು.

Dharmendra Pradhan Launched the Pradhan Mantri Ujjwala Yojana in Hubball

ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ 'ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ' ಯನ್ನೂ ಪ್ರಶಂಸಿಸಿದರು.

ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ರಾಜ್ಯದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ. ಖಾದರ್, ಕೇಂದ್ರ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಸಚಿವ ರಮೇಶ ಜಿಗಜಿಣಗಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Union petroleum and natural gas minister Dharmendra Pradhan Launched the Pradhan Mantri Ujjwala Yojana (PMUY) Scheme in Hubballi on Saturday.
Please Wait while comments are loading...