ಪೋಕ್ಸೊ ಪ್ರಕರಣ: ಯಡಿಯೂರಪ್ಪ ತೇಜೋವಧೆ ಸರಿಯಲ್ಲ- ಬಿಎಸ್‌ವೈ ಬೆನ್ನಿಗೆ ನಿಂತ ಸಚಿವ ದಿನೇಶ್ ಗುಂಡೂರಾವ್
ಹುಬ್ಬಳ್ಳಿ, ಮಾರ್ಚ್ 15: ಕರ್ನಾಟಕ ಬಿಜೆಪಿಯ ಪ್ರಬಲ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಪ್‌ಐಆರ್ ದಾಖಲಾಗಿದೆ. ಈ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಈಗಲೇ ಏನು ಹೇಳಲು ಆಗದು ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು. ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಜನರ ಕಾಳಜಿಯಿಂದ 1000 ರೂ. ಇಳಿಕೆ ಮಾಡಿ
ಬಿಜೆಪಿ ನಾಯಕರಿಗೆ ದೇಶದ ಜನರ ಬಗ್ಗೆ ಕಾಳಜಿ ಇದ್ದರೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1000 ರೂಪಾಯಿ ದರ ಇಳಿಸಬೇಕಿತ್ತು. ಸಿಕ್ಕಾಪಟ್ಟೆ ಬೆಲೆ ಏರಿಕೆ ಮಾಡಿ ಏರಿಸಿ ಈಗ 100 ರೂ. ಇಳಿಸಿದ್ದಾರೆ. ಇದು ಚುನಾವಣಾ ಗಿಮಿಕ್ ಹೊರತು ಜನರ ಮೇಲಿನ ಕಾಳಜಿಯಿಂದಲ್ಲ ಎಂದು ದೂರಿದ ಅವರು, ಪ್ರಧಾನಿ ಮೋದಿಯವರಿಗೆ ನೈತಿಕತೆಯಿದ್ದರೆ 1000 ರೂ. ಇಳಿಸಬೇಕು ಎಂದು ಆಗ್ರಹಿಸಿದರು.

ಸಿಎಎ ಚುನಾವಣಾ ಗಿಮಿಕ್
ಕರ್ನಾಟಕ ನಾವು 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ತೆಗೆದುಕೊಂಡು ಬಿಜೆಪಿಯವರು ಬಂದಿದ್ದಾರೆ. ಕಳೆದ 10 ವರ್ಷದಲ್ಲಿ ಇವರ ಅಭಿವೃದ್ಧಿ ಶೂನ್ಯ. ಹೀಗಾಗಿಯೇ ಚುನಾವಣೆ ಸಂದರ್ಭದಲ್ಲಿ ಇಂತಹ ವಿಷಯಗಳನ್ನು ತಂದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಪ್ರಧಾನಿ ಮೋದಿಯವರು ಅವರು ಪ್ರಧಾನಿ ಹುದ್ದೆ ಅಲಂಕರಿಸುವವರೆಗೂ ಭಾರತ ದೇಶ ಇರಲಿಲ್ಲವೋ? ಅಥವಾ ದೇಶದಲ್ಲಿ ಅಭಿವೃದ್ಧಿ ಆಗಿರಲಿಲ್ಲವೋ? ಇದೀಗ ಸ್ವರ್ಗ ಆಗಿದೆಯಾ? ಸುಮ್ಮನೆ ಜನರಿಗೆ ಮಂಕು ಬೂದಿ ಎರಚಿದ್ದಾರೆ. ಇದೀಗ ಬಹುತೇಕರಿಗೆ ಇವರ ನಿಜವಾದ ಬಣ್ಣ ಗೊತ್ತಾಗಿದೆ.
ಬಿಜೆಪಿ ಸಂಸದರು ಕಾಂಗ್ರೆಸ್ ಸಂಪರ್ಕ
ನಾವು ಹೇಳಿದಂತೆ ಮಾಡಿದ್ದೇವೆ. ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿ ಸಂಸದರು ನಮ್ಮ ಪಕ್ಷದ ಅಧ್ಯಕ್ಷರ ಜೊತೆಗೆ ಸಂಪರ್ಕದಲ್ಲಿರಬಹುದು. ಈ ಬಗ್ಗೆ ನಾಯಕರು ಮಾತನಾಡಿದ್ದಾರೆ. ನನಗೆ ಇದರ ಮಾಹಿತಿ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕ್ಯಾಂಡಿ ನಿಷೇಧ ಕುರಿತು ಈಗಾಗಲೇ ಮಾಹಿತಿ ಕೊಟ್ಟಿದ್ದೇವೆ. ಆಹಾರ ಪದಾರ್ಥಗಳಲ್ಲಿ ಯಾವುದೇ ಕಲರ್ ಬಳಸಬಾರದು ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ಜನರು ಕೂಡ ಜಾಗೃತರಾಗಬೇಕು. ಒಂದು ವೇಳೆ ನಿಷೇಧಿತ ಬಣ್ಣ ಬಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಎಚ್ಚರಿಕೆ ನೀಡಿದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications