ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ವಿಶ್ವದ ಅತಿ ಉದ್ದದ ರೈಲ್ವೆ ಫ್ಲಾಟ್ ಫಾರ್ಮ್" ಆಗಲಿದೆ ಹುಬ್ಬಳ್ಳಿ ರೈಲ್ವೆಸ್ಟೇಷನ್

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜೂನ್ 05: ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲು ನಿಲ್ದಾಣ ಭಾಜನವಾಗಲಿದೆ.

Recommended Video

ಶಾಲೆ ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು | Oneindia Kannada

ಈಗಿರುವ ಒಂದನೇ ಪ್ಲಾಟ್‌ಫಾರ್ಮ್ 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್‌ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಕೋವಿಡ್ ಕೇರ್ ಸೆಂಟರ್ ಆಗಲಿದೆ ಕರ್ನಾಟಕದ 14 ರೈಲು ನಿಲ್ದಾಣಕೋವಿಡ್ ಕೇರ್ ಸೆಂಟರ್ ಆಗಲಿದೆ ಕರ್ನಾಟಕದ 14 ರೈಲು ನಿಲ್ದಾಣ

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್ ‌ಪುರದಲ್ಲಿ 1,366 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಇದ್ದು, ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ.

Hubballi Railway Station Will Become Longest Railway Platform In The World

ಹುಬ್ಬಳ್ಳಿ-ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯ ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹಚ್ಚಿಸಲಾಗುತ್ತಿದೆ. ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ಆರಂಭಿಸಲಾಗುತ್ತಿದೆ. ಪ್ಲಾಟ್ ಫಾರ್ಮ್ ನಿರ್ಮಾಣ, ಸಿಗ್ನಲ್, ವಿದ್ಯುತ್ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ. ಒಟ್ಟಿನಲ್ಲಿ ರೈಲು‌ ನಿಲ್ದಾಣದಿಂದಾಗಿ ವಾಣಿಜ್ಯ ನಗರಿಗೆ ಮತ್ತೊಂದು ಗರಿ ಬಂದಂತಾಗಿದೆ.

English summary
The commercial city Hubbali railway station will soon to have the largest railway platform in the world
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X