ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಎನ್ನುವುದೇ ರಾಜಕೀಯ : ಬೊಮ್ಮಾಯಿ

ಹುಬ್ಭಳ್ಳಿ, ಸೆಪ್ಟೆಂಬರ್ 05 : "ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ ಎನ್ನುವುದೇ ರಾಜಕೀಯ" ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, "ಬಂಧನ ಪ್ರಕರಣ ರಾಜಕೀಯ ಪ್ರೇರಿತ ಎನ್ನುವುದು ರಾಜಕೀಯ. ಡಿ. ಕೆ. ಶಿವಕುಮಾರ್ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಂಡಿದೆ" ಎಂದು ಸ್ಪಷ್ಟಪಡಿಸಿದರು.

"ರಾಮನಗರ ಜಿಲ್ಲಾ ಬಂದ್ ಶಾಂತಿಯುತವಾಗಿದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಸಾರ್ವಜನಿಕ ಆಸ್ತಿ ನಷ್ಟ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

DK Shivakumar Arrested Issue Politicized Says Basavaraj Bommai

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ ಬಂಧಿಸಿದೆ. ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 13ರ ತನಕ ಅವರನ್ನು ಇಡಿ ವಶಕ್ಕೆ ಒಪ್ಪಿಸಿ ಬುಧವಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿಲ್ಲ : ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ಶಿವಕುಮಾರ್ ಬಂಧನ ಸಂಪೂರ್ಣ ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಿದೆ" ಎಂದು ಆರೋಪಿಸಿದರು.

"ಡಿ. ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಕಿಡಿಗೇಡಿಗಳು ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿಲ್ಲ" ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+