ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುರ್ತಾಗಿ ಹುಬ್ಬಳ್ಳಿಯಲ್ಲಿ ಇಳಿದ ಎಚ್‌ಡಿಕೆ; ಡಿಕೆಶಿ ಭೇಟಿ!

|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 02 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಬಗ್ಗೆ ಎರಡು ದಿನದಿಂದ ಭಾರಿ ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಇಬ್ಬರು ಪ್ರಭಾವಿ ನಾಯಕರು ಹುಬ್ಬಳ್ಳಿಯಲ್ಲಿ ಭೇಟಿಯಾದರು.

ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿಯಾದರು. ಸಮ್ಮಿಶ್ರ ಸರ್ಕಾರವಿದ್ದಾಗ ಅತ್ಯಾಪ್ತರಾಗಿದ್ದ ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟುಹಾಕಿದೆ.

ಡಿಕೆಶಿಗೆ ಐಟಿ ನೋಟಿಸ್, ಹುಬ್ಬಳ್ಳಿಯಿಂದ ತುರ್ತಾಗಿ ವಾಪಸ್!ಡಿಕೆಶಿಗೆ ಐಟಿ ನೋಟಿಸ್, ಹುಬ್ಬಳ್ಳಿಯಿಂದ ತುರ್ತಾಗಿ ವಾಪಸ್!

15 ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಇಬ್ಬರು ನಾಯಕರು ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಹುಬ್ಬಳ್ಳಿಯಲ್ಲಿ ಉಭಯ ನಾಯಕರು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು.

ಕುಮಾರಸ್ವಾಮಿ ಕಣ್ಣೀರಿಗೆ ನಾರಾಯಣ ಗೌಡ ಹೇಳಿದ್ದೇನು? ಕುಮಾರಸ್ವಾಮಿ ಕಣ್ಣೀರಿಗೆ ನಾರಾಯಣ ಗೌಡ ಹೇಳಿದ್ದೇನು?

ರಾಜ್ಯದಲ್ಲಿ ಉಪ ಚುನಾವಣೆ ಕಾವು ಹೆಚ್ಚಾಗಿದೆ. ಡಿಸೆಂಬರ್ 5ರಂದು 15 ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಸಿಗಲಿದೆ ಎಂಬ ಲೆಕ್ಕಾಚಾರ ಜೋರಾಗಿದೆ.

ಪುನಃ ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಯಾರು, ಏನು ಹೇಳಿದರು? ಪುನಃ ಕಾಂಗ್ರೆಸ್-ಜೆಡಿಎಸ್ ಮೈತ್ರಿ : ಯಾರು, ಏನು ಹೇಳಿದರು?

ತುರ್ತಾಗಿ ಹುಬ್ಬಳ್ಳಿಯಲ್ಲಿ ಇಳಿದ ಎಚ್‌ಡಿಕೆ

ತುರ್ತಾಗಿ ಹುಬ್ಬಳ್ಳಿಯಲ್ಲಿ ಇಳಿದ ಎಚ್‌ಡಿಕೆ

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಹೊರಟಿದ್ದರು. ಹವಾಮಾನ ವೈಪರೀತ್ಯದ ಕಾರಣ ಹೆಲಿಕಾಪ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಯಿತು. ಆಗ ಅಲ್ಲಿದ್ದ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು.

ಬೆಂಗಳೂರಿಗೆ ಹೊರಟಿದ್ದ ಡಿ. ಕೆ. ಶಿವಕುಮಾರ್

ಬೆಂಗಳೂರಿಗೆ ಹೊರಟಿದ್ದ ಡಿ. ಕೆ. ಶಿವಕುಮಾರ್

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಉಪ ಚುನಾವಣೆ ಪ್ರಚಾರಕ್ಕೆ ಹೋಗಬೇಕಿತ್ತು. ಆದರೆ, ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದ ಕಾರಣ ಬೆಂಗಳೂರಿಗೆ ವಾಪಸ್ ಹೊರಟಿದ್ದರು. ಈ ಸಂದರ್ಭದಲ್ಲಿ ಎಚ್. ಡಿ. ಕುಮಾರಸ್ವಾಮಿ ಭೇಟಿಯಾದರು.

ಇಬ್ಬರು ಉತ್ತಮ ಸ್ನೇಹಿತರು

ಇಬ್ಬರು ಉತ್ತಮ ಸ್ನೇಹಿತರು

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಚ್. ಡಿ. ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಆಪ್ತ ಸ್ನೇಹಿತರು. ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿದ್ದಾಗ ದೆಹಲಿಗೆ ತೆರಳಿದ್ದ ಎಚ್. ಡಿ. ಕುಮಾರಸ್ವಾಮಿ ಸ್ನೇಹಿತನನ್ನ ಭೇಟಿ ಮಾಡಿದ್ದರು. ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದರು.

ವಿಮಾನ ನಿಲ್ದಾಣದಲ್ಲಿ ಸ್ವಾಗತ

ವಿಮಾನ ನಿಲ್ದಾಣದಲ್ಲಿ ಸ್ವಾಗತ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಡಿ. ಕೆ. ಶಿವಕುಮಾರ್ ಜೈಲು ಸೇರಿದ್ದರು. ದೆಹಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಅವರು ಬೆಂಗಳೂರಿಗೆ ವಾಪಸ್ ಆದಾಗ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಚ್. ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದರು.

English summary
Former minister and Congress leader D.K.Shivakumar met the former chief minister H.D.Kumaraswamy in Hubballi airport on December 2, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X