ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ವೈದ್ಯರ ಮುಷ್ಕರ, ನಾಳೆ ಒಪಿಡಿ ಬಂದ್

By Manjunatha
|
Google Oneindia Kannada News

ಹುಬ್ಬಳ್ಳಿ, ಜನವರಿ 01: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಹುಬ್ಬಳ್ಳಿ ಘಟಕ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಜನವರಿ 2 ರಂದು ದೇಶದಾದ್ಯಂತ ಕರಾಳ ದಿನ ಆಚರಿಸಲು ಕರೆ ನೀಡಿದ್ದು, ಹುಬ್ಬಳ್ಳಿಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಶಾಂತಿಯುತವಾಗಿ ಹೋರಾಟ ಮಾಡಲಾಗುವುದು. ತುರ್ತು ಸೇವೆ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಐಎಂಎ ಹುಬ್ಬಳ್ಳಿ ಘಟಕ ಅಧ್ಯಕ್ಷ ಡಾ.ಜಿ.ಬಿ.ಸತ್ತೂರ ತಿಳಿಸಿದರು.

Doctors protest in Hubballi against National Medical commission

1934ರಲ್ಲಿ ಪ್ರಾರಂಭವಾಗ ಭಾರತೀಯ ವೈದ್ಯ ಪರಿಷತ್ ಸಂಸ್ಥೆಯನ್ನು (ಎಂಐಸಿ) ಮುಚ್ಚಿ ಆ ಜಾಗಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕ್ರಮಕ್ಕೆ ವೈದ್ಯರು ತೀರ್ವ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನಾಳೆ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ಎಂಐಸಿ ಕರೆ ನಿಡಿದೆ.

English summary
In Hubballi Doctors protest against Tahsildar office in protest of forming National Medical commission and Extermination of Indian Medical association.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X