ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ತನಿಖೆ ನಡೆಸುತ್ತೇವೆ ಎಂದ ಸಿಎಂ

ಹುಬ್ಬಳ್ಳಿ, ಆಗಸ್ಟ್‌, 21: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. "ಯಾರು ಏನೇ ಒಪ್ಪಿಕೊಂಡರೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತು ಈಗಾಗಲೇ ಮಾತನಾಡಿದ್ದೇನೆ" ಎಂದು ಹೇಳಿದರು.

ಭಾನುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಯಾರೇ ಏನೇ ಒಪ್ಪಿಕೊಂಡರೂ ಸೂಕ್ತ ತನಿಖೆ ನಡೆಸುತ್ತೇವೆ" ಎಂದು ಖಡಕ್ ಆಗಿ ಹೇಳಿದರು.

"ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆಯನ್ನು ಹೆಚ್ಚಿಸುವಂತೆ ಈಗಾಗಲೇ ಆದೇಶ ನೀಡಲಾಗಿದೆ. ಮೊಟ್ಟೆ ಎಸೆತ ವಿಚಾರದಲ್ಲಿ ಯಾರು ಏನೇ ಒಪ್ಪಿಕೊಳ್ಳಲಿ, ನಾನು ತನಿಖೆ ಮಾಡಿಸುತ್ತಿದ್ದೇನೆ. ನಾಳೆ ಇನ್ನೊಬ್ಬ ಮಾಡಿದ್ದು ಎಂದು ಕ್ಲೈಮ್‌ ಮಾಡಿಕೊಳ್ಳುತ್ತಾನೆ. ಹೀಗಾಗಿಯೇ ತನಿಖೆ ನಡೆಸಲಾಗುತ್ತಿದ್ದು, ಇದೆಲ್ಲ ಮುಗಿದ ನಂತರ ನಾನು ಮಾತನಾಡುತ್ತೇನೆ" ಎಂದು ತಿಳಿಸಿದರು.

Egg Thrown At Siddaramaiah Car CM Basavaraj Bommai Said We Will Probe Issue

"ಪ್ರಚೋದನಾಕಾರಿ ಹೇಳಿಕೆ ಬೇಡ, ಅಭಿಪ್ರಾಯ ಹಂಚಿಕೊಳ್ಳಿ. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಇದು ಒಂದು ಕಡೆ ನಡೆಯುತ್ತಿಲ್ಲ, ಎರಡೂ ಕಡೆಯೂ ನಡೆಯುತ್ತಿದೆ. ಯಾರೂ ಸಹ ಇನ್ನೊಬ್ಬರ ಮನ ನೋಯಿಸುವ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. ಕಾನೂನು ಉಲ್ಲಂಘಿಸುವುದ ಸರಿಯಲ್ಲ" ಎಂದರು.

ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿಲ್ಲ; "ಉತ್ತರ ಕರ್ನಾಟಕದ‌ ಮಹತ್ವಾಕಾಂಕ್ಷೆಯ ಯೋಜನೆ ಆದ ಮಹದಾಯಿ ಯೋಜನೆ ನೆನೆಗುದಿದೆಗೆ ಬಿದ್ದಿಲ್ಲ. ಅದು ಪ್ರಗತಿಯಲ್ಲಿದ್ದು, ಪರಿಸರ ಇಲಾಖೆಯ ಅಂತಿಮ ಪ್ರಮಾಣ ಪತ್ರ ಬೇಕಾಗಿದ್ದು, ವರದಿ ಬಂದ ನಂತರ ಇನ್ನಷ್ಟು ವೇಗ ಪಡೆಯಲಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Egg Thrown At Siddaramaiah Car CM Basavaraj Bommai Said We Will Probe Issue

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಈಗಾಗಲೇ ರಾಜ್ಯಾದ್ಯಂತ ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇದರ ಬೆನ್ನಲ್ಲೇ ಹುಬ್ಬಳ್ಳಿ ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸೂಕ್ತ ತನಿಖೆಗೆ ವಹಿಸಿದ್ದೇನೆ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+