ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಹುಲ್ ಗೆ ಎಚ್ಕೆ ಪಾಟೀಲ್ ಕಳಿಸಿದ ರಾಜೀನಾಮೆ ಪತ್ರದಲ್ಲೇನಿದೆ?

|
Google Oneindia Kannada News

ಹುಬ್ಬಳ್ಳಿ, ಮೇ 24: ನೈತಿಕ ಹೊಣೆ ಹೊತ್ತು ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಹೀನಾಯ ಸೋಲು: ರಾಜೀನಾಮೆಗೆ ಎಚ್‌ಕೆ ಪಾಟೀಲ್ ನಿರ್ಧಾರ ಕಾಂಗ್ರೆಸ್ ಹೀನಾಯ ಸೋಲು: ರಾಜೀನಾಮೆಗೆ ಎಚ್‌ಕೆ ಪಾಟೀಲ್ ನಿರ್ಧಾರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಗಣನೀಯವಾಗಿ ಕುಸಿದಿದ್ದು, ಈ ಸೋಲಿನ ನೈತಿಕ ಹೊಣೆಯನ್ನು ಹೊತ್ತು ನಾನು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

Elections 2019: HK Patil send resignation letter to Rahul Gandhi

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು. ಜನರು ಏನು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ.

ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ ಎಂಬುದು ಭ್ರಮೆ: ಎಚ್ಕೆ ಪಾಟೀಲ್
ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಗಣನೀಯವಾಗಿ ಕುಸಿತಗೊಂಡಿರುವುದು ನೋವಿನ ಸಂಗತಿಯಾಗಿದೆ. ಇದರ ಹೊಣೆಯನ್ನು ನೈತಿಕವಾಗಿ ಹೋರುತ್ತೇನೆ ಎಂದರು.

ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ

ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ

ನನ್ನ ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಅರಿತು ನಾನು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ನನ್ನ ರಾಜೀನಾಮೆ ಪತ್ರವನ್ನು ರಾಹುಲ್ ಗಾಂಧಿ ಅವರಿಗೆ ರವಾನಿಸುತ್ತಿದ್ದೇನೆ ಎಂದು ಇದೇ ಸಂಧರ್ಭದಲ್ಲಿ ಪ್ರಕಟಿಸಿದರು.

ಬೇರು ಮಟ್ಟದಿಂದ ಸಂಘಟನೆ

ಬೇರು ಮಟ್ಟದಿಂದ ಸಂಘಟನೆ

ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಬೇರು ಮಟ್ಟದಿಂದ ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುವುದಾಗಿ ತಿಳಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆ ನೀಡುವ ತೀರ್ಪಿಗೆ ನಾವು ತಲೆ ಬಾಗಲೇಬೇಕು. ಲೋಕಸಭೆ ಚುನಾವಣೆಯಲ್ಲಿ ಜನತೆ ನೀಡಿದ ತೀರ್ಪಿಗೆ ನಾವು ತಲೆಬಾಗುತ್ತೇವೆ. ಈ ಸೋಲನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಹೇಳಿದರು.

ಮೈತ್ರಿಯಿಂದ ಸ್ವಲ್ಪಮಟ್ಟಿನ ತೊಂದರೆ

ಮೈತ್ರಿಯಿಂದ ಸ್ವಲ್ಪಮಟ್ಟಿನ ತೊಂದರೆ

ಜನತೆಯ ಈ ತೀರ್ಪಿನಿಂದ ರಾಜ್ಯ ಸರಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದಂತೆ ಮೈತ್ರಿ ನಾಯಕರು ನಡೆದುಕೊಳ್ಳಬೇಕು. ಕೆಲವೊಂದು ಕ್ಷೇತ್ರಗಳಲ್ಲಿ ನಮಗೆ ಮೈತ್ರಿಯಿಂದ ಸ್ವಲ್ಪಮಟ್ಟಿನ ತೊಂದರೆ ಆಗಿದ್ದು, ಇನ್ನು ಕೆಲವು ಕ್ಷೇತ್ರಗಳಲ್ಲಿ ಯಾವುದೇ ತೊಂದರೆ ಆಗಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರ ಅಬಾಧಿತ

ಮೈತ್ರಿ ಸರ್ಕಾರ ಅಬಾಧಿತ

ಚುನಾವಣೆಯ ನಂತರ ಸಮ್ಮಿಶ್ರ ಸರಕಾರ ಮತ್ತಷ್ಟು ಗಟ್ಟಿಗೊಳ್ಳಲಿದೆ. ಮೋದಿ ಗೆಲವಾಗಬಹುದು, ಬಿಡಬಹುದು ಆದರೆ ಕರ್ನಾಟಕ ಸರಕಾರ ಮತ್ತಷ್ಟು ಗಟ್ಟಿಯಾಗುವುದು ನಿಶ್ಚಿತ ಎಂದರು. ಬಿಜೆಪಿಯವರು ಸರಕಾರ ಅಸ್ತಿತ್ವಕ್ಕೆ ಬಂದ ಸಮಯದಿಂದಲೂ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ ಎಂದು ಚುನಾವಣಾ ಪ್ರಚಾರದ ವೇಳೆ ಎಚ್ಕೆ ಪಾಟೀಲ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
KPCC campaign committee chief HK Patil has sent his resignation letter to AICC president Rahul Gandhi. Here is summary of his resignation letter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X