ಹುಬ್ಬಳ್ಳಿಯಲ್ಲಿ ಪುನೀತ್ ರಾಜ್‌ಕುಮಾರ್ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿ
ಹುಬ್ಬಳ್ಳಿ, ಅಕ್ಟೋಬರ್, 29: ಪವರ್ ಸ್ಟಾರ್ ಡಾ.ಪುನೀತ್ ರಾಜ್‌ಕುಮಾರ್ ನಮ್ಮನ್ನ ಅಗಲಿ ಇಂದಿಗೆ ಒಂದು ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ಸರ್ಕಲ್ ಬಳಿ ಸಸಿ ವಿತರಣೆ ಮಾಡಲಾಯಿತು. ಪುನೀತ್ ರಾಜ್‍ಕುಮಾರ್ ಅವರ ನೆನಪಿನಾರ್ಥ ಸಸಿ ಪೋಷಿಸಿ ಬೆಳಸಲು ಜನರಿಗೆ ಅರಿವು ಮೂಡಿಸಲಾಯಿತು. ಅಲ್ಲಿದೇ ಅಪ್ಪುವನ್ನು ನೆನೆದು ಅಭಿಮಾನಿಗಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಅಪ್ಪು ನೆನೆದು ಕಣ್ಣೀರಿಟ್ಟ ಅಭಿಮಾನಿಗಳು
ಡಾ.ಪುನೀತ್ ರಾಜ್‍ಕುಮಾರ್ ಅವರು ಪರಿಸರ ಕುರಿತು ಅಪಾರ ಪ್ರೀತಿಯನ್ನು ಹೊಂದಿದ್ದರು. ಆದ್ದರಿಂದ ಅವರ ಮಾದರಿ ಕೆಲಸ ಹಾಗೂ ಪ್ರಕೃತಿ ಬಗ್ಗೆ ಇದ್ದ ಕಾಳಜಿಯನ್ನು ಮುಂದುವರಿಸಿಕೊಂಡು ಹೋಗಲು ಅಭಿಮಾನಿಗಳು ಪಣತೊಟ್ಟಿದ್ದಾರೆ. ಮುಂದಿನ ಪೀಳಿಗೆಗೆ ಪರಿಸರ ಉಳಿಸಿ ಬೆಳೆಸಲು ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಹಾಗಾಗಿ ಪುನೀತ್ ಅವರ ನೆನಪು ಪರಿಸರದಂತೆ ಸದಾ ಹಸಿರಾಗಿರಲು ಸಸಿಗಳನ್ನು ಹಂಚುವ ಮೂಲಕ ಮಾದರಿಯಾದರು. ನಂತರ ಚೆನ್ನಮ್ಮ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು. ಪುನೀತ್ ಭಾವಚಿತ್ರಕ್ಕೆ ಅಭಿಮಾನಿಗಳು ಪುಷ್ಪ ಅರ್ಪಣೆ ಮಾಡಲಾಯಿತು. ವಿವಿಧ ಕನ್ನಡಪರ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪುನೀತ್ ರಾಜ್‍ಕುಮಾರ್ ಭಾವಚಿತ್ರ ಇರುವ ವಾಹನದೊಂದಿಗೆ ಮೆರವಣಿಗೆ ಮಾಡಲಾಯಿತು.

ಕನ್ನಡ ಹೋರಾಟಗಾರ, ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈಯಲ್ಲಿ ಕನ್ನಡ ಬಾವುಟ ಹಿಡಿದು ಅಪ್ಪುಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನೆಚ್ಚಿನ ನಟ ಡಾ.ಪುನೀತ್ ರಾಜ್‌ಕುಮಾರ್ ನೆನೆದು ಅಭಿಮಾನಿಗಳು ಭಾವುಕರಾದರು. ಡಾ. ಪುನೀತ್ ರಾಜ್‍ಕುಮಾರ್ ಅವರ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳು ಪ್ರತಿನಿತ್ಯ ನಡೆಯಬೇಕು. ಬಡವರು, ಅನಾಥರು ಹಾಗೂ ಸಮಾಜದಲ್ಲಿ ನೊಂದವರಿಗೆ ಆಸರೆಯಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಅಪ್ಪು ಅವರ ಅಭಿಮಾನಿಗಳು ಹಾಕಿಕೊಂಡಿದ್ದಾರೆ. ಅಲ್ಲದೇ ಅಪ್ಪು ಮಾದರಿ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಭಿಮಾನಿಗಳು ಶಪಥ ಮಾಡಿದರು.












Click it and Unblock the Notifications