ನೀರಿಗಾಗಿ ಹೋರಾಟದಲ್ಲಿ ಸಿಕ್ಕಿದ್ದು ಲಾಠಿ ಏಟು..ಜೈಲೂಟ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಳಿ ರೈತರ ಆಕ್ರೋಶ
ಹುಬ್ಬಳ್ಳಿ, ಸೆಪ್ಟೆಂಬರ್ 09: ಕಳಸಾ ಬಂಡೂರಿ ಹಾಗೂ ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆಗಾಗಿ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಯ 11 ತಾಲೂಕಿನ ರೈತರು ಸತತ 44 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಇದರ ಪ್ರತಿಫಲವಾಗಿ ಅನ್ನದಾತರಿಗೆ ಸಿಕ್ಕಿದ್ದು ಲಾಠಿ ಏಟು, ಜೈಲಿನ ಊಟ. ಮಹದಾಯಿ ನೀರು ಮಾತ್ರ ಸಿಕ್ಕಿಲ್ಲ ಎಂದು ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹಾಗೂ ಹಸಿರು ರೈತ ಸೇನೆ ಆಕ್ರೋಶ ವ್ಯಕ್ತಪಡಿಸಿತು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಳಿ ತಮ್ಮ ನೋವು, ಆಕ್ರೋಶ ಹೊರ ಹಾಕಿದ ರೈತರು, ಮಹದಾಯಿ ಯೋಜನೆಗೆ ತಕರಾರು ಎತ್ತಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಕಾರಣ ಮುಂದಿಟ್ಟುಕೊಂಡು ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರಾಕರಿಸಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ ಎಂದರು.

ಕರ್ನಾಟಕದ 435 ಎಕರೆ ಅರಣ್ಯ ಬಳಕೆಯಾಗುವ ಗೋವಾ- ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಮಂಡಳಿಯು ಷರತ್ತು ಬದ್ಧ ಒಪ್ಪಿಗೆ ನೀಡಿದಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ನಗರದ ಮಯೂರ ಗಾರ್ಡನ್‌ನಲ್ಲಿರುವ ಗೃಹ ಕಚೇರಿಯಿಂದ ಹೊರಬರುತ್ತಿದ್ದಂತೆ ಸಿಟ್ಟಿನಿಂದಲೇ ಇಂಧನ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಗೋವಾದ ಹೆಚ್ಚುವರಿ ವಿದ್ಯುತ್ ಮಾರ್ಗ ಯೋಜನೆಗೆ ರಾಜ್ಯದ ಕಾಡು ಒದಗಿಸುವ ಯೋಜನೆಗೆ ವಿರೋಧ ಇದೆ. ಹೀಗಿದ್ದರೂ ವನ್ಯಜೀವಿ ಮಂಡಳಿಯ ತೀರ್ಮಾನವು ರಾಜ್ಯಕ್ಕೆ ಕಹಿಯಾಗಿದ್ದರೆ, ಗೋವಾಕ್ಕೆ ಸಿಹಿಯಾಗಿದೆ. ಗೋವಾ ವಿದ್ಯುತ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡಿಸಿದರೆ, ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಮತ್ತೆ ನಿರಾಕರಿಸಿದೆ.

ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿದ್ದರಿಂದ ಮಹದಾಯಿ ಯೋಜನೆಗೆ ಹಿನ್ನಡೆ ಆಗಿದೆ. ಗೋವಾ ರಾಜ್ಯಕ್ಕೆ ವಿದ್ಯುತ್ ಯೋಜನೆಗೆ ಅನುಮತಿ ನೀಡಲಾಗಿದ್ದು ಆದರೆ, ಕರ್ನಾಟಕ ಮಹದಾಯಿಗೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಯೋಜನೆಗೆ ಅನುಮತಿ ಕೊಡುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಲು ರೈತರು ಆಗ್ರಹಿಸಿದರು.
ಈ ವೇಳೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಧ್ಯಮದವರನ್ನು ಹೊರಗಿಟ್ಟು ರೈತರನ್ನು ಕಚೇರಿಗೆ ಕರೆದು, ಈ ಬಗ್ಗೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರು ಹಾಗೂ ಸಚಿವರ ಜೊತೆಗೆ ಚರ್ಚೆ ಮಾಡುವ ಭರವಸೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿಲ್ಲ. ರಾಷ್ಟ್ರೀಯ ಹುಲಿ ಪ್ರಾಧಿಕಾರ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ವನ್ಯಜೀವಿ ಮಂಡಳಿ ಯಾವುದೇ ನಿರ್ಧಾಕ್ಕೆ ಬಂದಿಲ್ಲ. ಮಹದಾಯಿ ಯೋಜನೆಗೆ ಅನುಷ್ಠಾನಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications