ಬಾಲಕಿ ಜೊತೆ ಅಸಭ್ಯ ವರ್ತನೆ ವಿಡಿಯೋ ವೈರಲ್‌: ಐವರು ಯುವಕರ ಬಂಧನ

ಹುಬ್ಬಳ್ಳಿ, ನವೆಂಬರ್‌ 16: ಹಳೇ ಹುಬ್ಬಳ್ಳಿಯ ಶರಾವತಿ ನಗರದ ಬಳಿ ಶಾಲಾ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಹಾಗೂ ಅವರಿಗೆ ಸಹಕರಿಸಿದ ಮೂವರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಬಂಧಿತರಿಂದ ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ತೆರಳುವಾಗ ಬಾಲಕಿಯನ್ನು ಇಬ್ಬರು ಯುವಕರು ಸ್ಕೂಟಿಯಲ್ಲಿ ಹಿಂಬಾಲಿಸಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ದೃಶ್ಯಾವಳಿ ಅಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲಗಗ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಸಂತ್ರಸ್ತ ಬಾಲಕಿಯ ಪೋಷಕರು ಶುಕ್ರವಾರ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

Five Youths Were Arrested By Hubballi Police Who Behaved Indecently With A Girl

ಆರೋಪಿಗಳ ಪತ್ತೆಗೆ ಇನ್ಸ್‌ಪೆಕ್ಟರ್ ಎಸ್.ಎಚ್. ಹಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಪ್ರಮುಖ ಆರೋಪಿಗಳಾದ ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರ ನಿವಾಸಿಗಳಾದ ಶುಭಂ ತಡಸ ಮತ್ತು ಮೆಹಬೂಬ ಹಿತ್ತಲಮನಿ ಅವರನ್ನು ಬಂಧಿಸಲಾಗಿದೆ. ಅವರಿಗೆ ಸಹಕರಿಸಿದ ಆರೋಪಿಗಳಾದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ್‌ ನರೇಂದ್ರ ಅವರನ್ನು ಸಹ ಬಂಧಿಸಲಾಗಿದೆ ಎಂದು‌ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಸ್‌ಐ ರುದ್ರಪ್ಪ ಗುಡದರಿ, ಎಎಸ್ಐ ಪಿ.ಬಿ. ಕಾಳೆ ಮತ್ತು ಸಿಬ್ಬಂದಿ ಫಕ್ಕಿರೇಶ ಗೊಬ್ಬರಗುಂಪಿ, ಅಭಯ ಕಟ್ನಳ್ಳಿ, ನಾಗರಾಜ ಕೆಂಚಣ್ಣನವರ, ಕೃಷ್ಣ ಮೋಟೆಬೆನ್ನೂರ, ಸಂತೋಷ ವಲ್ಯಾಪುರ, ರಮೇಶ್‌ ಹಲ್ಲೆ, ಕಲ್ಲನಗೌಡ ಗುರನಗೌಡ, ವಿಠಲ ಹೊಸಳ್ಳಿ, ಜಗದೇಶ್‌ ಗೌಂಡಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಆರೋಪಿ ಶುಭಂ ತಡಸ ವಿರುದ್ಧ ಕಸಬಾಪೇಟೆ ಮತ್ತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು, ಸಾಗರ ಸಾತಪುತೆ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು, ಸಚಿನ್‌ ನರೇಂದ್ರ ವಿರುದ್ಧ ಒಂದು ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಕಮಿಷನರ್ ಎನ್.‌ ಶಶಿಕುಮಾರ್ ಶನಿವಾರ ಮಾಹಿತಿ ನೀಡಿದ್ದಾರೆ.

ಬೆಳಗಾವಿ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಘಟನೆ ಮತ್ತೊಂದು ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ವಡ್ಡರವಾಡಿ ಪ್ರದೇಶದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪ ಮಾಡಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ. ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಅಪಮಾನ‌ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿದಂತೆ ನಾಲ್ಕು ಜನ ವಾಸವಾಗಿದ್ದಾರೆ. ಪಕ್ಕದ ಮನೆಯ ಕುಟುಂಬದವರು ಮಹಿಳೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಮಾಡುತ್ತ ಬಂದಿದ್ದಾರೆ. ಮನೆಗೆ ಪದೇ ಪದೇ ಯಾರೋ ಸಂಬಂಧವಿಲ್ಲದವರು ಬರುತ್ತಾರೆ. ಮನೆ ಖಾಲಿ ಮಾಡುವಂತೆ ಹೇಳುತ್ತಿದ್ದರು ಎನ್ನಲಾಗಿದೆ. ಇದೀಗ ನೆರೆ ಮನೆಯವರು ಏಕಾಏಕಿ ಮನೆಗೆ ನುಗ್ಗಿ ತಾಯಿ ಮಗಳನ್ನು ಹೊರಗೆಳೆದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+