ಪ್ರಯಾಣಿಕರಿಗೆ ಸಿಹಿ ಸುದ್ದಿ: ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಹೆಚ್ಚಾಗಲಿದೆ ವಿಮಾನಗಳ ಹಾರಾಟ- ಇಲ್ಲಿದೆ ಮಾಹಿತಿ
ಹುಬ್ಬಳ್ಳಿ, ಜನವರಿ 3: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲವು ದಿನಗಳಿಂದ ವಿಶೇಷ ವಿಮಾನ ಸೇವೆಯನ್ನು ಒದಗಿಸಲಾಗುತ್ತಿದೆ. ಈಗ ಮತ್ತೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ವಿಮಾನ ಸೇವೆಯನ್ನು ನಿಯೋಜನೆ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಚಿಂತನೆ ನಡೆಸಿದೆ.
ಈಗಾಗಲೇ ಸ್ಟಾರ್ ಏರ್ ಹಾಗೂ ಇಂಡಿಗೋ ವಿಮಾನಗಳು ದೆಹಲಿ, ಅಹ್ಮದಾಬಾದ್, ಹೈದರಾಬಾದ್, ಬೆಂಗಳೂರು, ಮೈಸೂರು ಸೇರಿದಂತೆ ಬಹುತೇಕ ಕಡೆಯಲ್ಲಿ ಹುಬ್ಬಳ್ಳಿಯಿಂದ ಕಾರ್ಯಾಚರಣೆ ನಡೆಸಿದ್ದು, ಜನರ ಬೇಡಿಕೆಗೆ ಅನುಗುಣವಾಗಿ ಈಗ ಮತ್ತಷ್ಟು ವಿಮಾನ ಸೇವೆಯನ್ನು ಹೆಚ್ಚಿಸಲು ಮುಂದಾಗಿದೆ. ಈ ಕುರಿತು ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇನ್ನೂ ರೂಪಾಂತರ ಕೋವಿಡ್ ನಿರ್ವಹಣೆಗೆ ಸಾಕಷ್ಟು ಕಟ್ಟುನಿಟ್ಟಾದ ಕ್ರಮವನ್ನು ಕೈಗೊಳ್ಳುವ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣ ಪ್ರಯಾಣಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದೆ. ಭಾರತ ಸರ್ಕಾರದ ನಿರ್ದೇಶನದ ಮೇರೆಗೆ ಈಗಾಗಲೇ ಸಾಕಷ್ಟು ಪೂರ್ವನಿರ್ಧರಿತ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮತ್ತಷ್ಟು ವಿಮಾನ ಸೇವೆ ಹೆಚ್ಚಿಸುವುದರ ಜೊತೆಗೆ ಜನರ ಆರೋಗ್ಯದ ಬಗ್ಗೆ ಕೂಡ ಕಾಳಜಿ ವಹಿಸಲಾಗುತ್ತಿದೆ ಎಂದು ವಿಮಾನ ನಿಲ್ದಾಣ ನಿರ್ವಾಹಕರು ತಿಳಿಸಿದ್ದಾರೆ.
ಒಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಜೊತೆಗೆ ಸರಕು ಸಾಗಾಣಿಕೆ ಸೇವೆಯನ್ನು ಒದಗಿಸುವ ಕಾರ್ಯಕ್ಕೆ ಮುಂದಾಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ಮತ್ತಷ್ಟು ಜನಮನ್ನಣೆ ಪಡೆಯಲಿದೆ.












Click it and Unblock the Notifications