ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೃತೀಯ ರಂಗ ಬಿಜೆಪಿಗೆ ಸರಿಸಾಟಿಯಲ್ಲ; ಶೆಟ್ಟರ್

|
Google Oneindia Kannada News

ಹುಬ್ಬಳ್ಳಿ, ಮೇ27: "ಮೂರನೇ ಅಲ್ಲ ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸರಿಸಾಟಿಯಾಗುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಈ ಮೂಲಕ ತೃತೀಯ ರಂಗ ರಚನೆ ಪ್ರಯತ್ನವನ್ನು ಲೇವಡಿ ಮಾಡಿದರು.

ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗವಾದರೂ ಮಾಡಿಕೊಳ್ಳಲಿ ಅದು ಅವರಿಗೆ ಬಿಟ್ಟದ್ದು" ಎಂದು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಟಾಂಗ್ ಕೊಟ್ಟರು.

ಈ ಮೂಲಕ ಬೆಂಗಳೂರಿನಲ್ಲಿ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರಾವ್, ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ನಡುವೆ ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

Former CM Jagadish Shettar Comment On Third Front Aganist BJP

ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಒಂದು ಕಡೆಗೆ ಅವರೇ ರಾಜಕೀಯವಾಗಿ ಆರೋಪ ಮಾಡುತ್ತಾರೆ. ಮತ್ತೊಂದು ಕಡೆಗೆ ಕಾನೂನಿನ ಮೇಲೆ ಗೌರವವಿದೆ. ಕಾನೂನು ರೀತಿ ಹೋರಾಟ ಮಾಡತ್ತೇನೆ ಎನ್ನುತ್ತಾರೆ" ಎಂದರು.

"ಡಿ‌. ಕೆ‌. ಶಿವಕುಮಾರ್‌ಗೆ ಕಾನೂನಿನ ಮೇಲೆ ಗೌರವ ಇದ್ದರೆ, ಅವರದ್ದು ತಪ್ಪು ಇರಲಿಲ್ಲ ಎಂದರೆ ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಎಲ್ಲದಕ್ಕೂ ರಾಜಕೀಯ ಮಾಡುವುದಕ್ಕೆ ಹೋಗಬೇಡಿ" ಎಂದು ಹರಿಹಾಯ್ದರು.

Former CM Jagadish Shettar Comment On Third Front Aganist BJP

ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಇಂದು ಸಂಜೆ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮೇಯರ್, ಉಪಮೇಯರ್ ಅಭ್ಯರ್ಥಿ ಆಯ್ಕೆ ಮಾಡಲಾಗುವುದು" ಎಂದರು.

Recommended Video

Narendra Modi ತಮಿಳು ನಾಡಿಗೆ ಹೋದಾಗ ಆಶ್ಚರ್ಯ ಕಾದಿತ್ತು | OneIndia Kannada

English summary
Third front formation against BJP most discuss topic in politics. Former chief minister Jagadish Shettar comment on Third front.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X