ಉಮೇಶ ಕತ್ತಿ ಅವರು ನೇರವಾಗಿ ಮಾತನಾಡುವ ವ್ಯಕ್ತಿ ಆಗಿದ್ದರು: ಜಗದೀಶ್‌ ಶೆಟ್ಟರ್

ಹುಬ್ಬಳ್ಳಿ, ಸೆಪ್ಟೆಂಬರ್‌, 07: ನಮ್ಮ ಮತ್ತು ಉಮೇಶ್‌ ಅವರ ನಡುವ ಆತ್ಮೀಯವಾದ ಸಂಬಂಧ ಇತ್ತು. ನೇರವಾಗಿ ಮಾತನಾಡುವಂತಹ ವ್ಯಕ್ತಿತ್ವ ಅವರದ್ದು. ಮನಸ್ಸಿಗೆ ಬಂದಂತೆ, ಸ್ಪಷ್ಟವಾಗಿ ಹೇಳುವಂತ ವ್ಯಕ್ತಿ ಅವರು ಎಂದು ಹೇಳುತ್ತಾ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉಮೇಶ್‌ ಕತ್ತಿ ಅವರು ಉತ್ತರ ಕರ್ನಾಟಕ ಮತ್ತು ಬೆಳಗಾವಿ ಅಭಿವೃದ್ಧಿ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಅವರ ಅಗಲಿಕೆಯಿಂದ ರಾಜ್ಯಕ್ಕೆ ಬಹಳಷ್ಟು ನಷ್ಟ ಆಗಿದೆ. ಉಮೇಶ್‌ ಕತ್ತಿ ಅವರ ಸಾವು ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದರು.

ಅವರು ನೀರಾವರಿ ವಿಚಾರವಾಗಿ ಬಹಳಷ್ಟು ನಿಷ್ಠುರವಾಗಿ ಮಾತನಾಡುತ್ತಿದ್ದರು. ಸದಾ ಪಕ್ಷದ ಬಗ್ಗೆ ಯೋಚನೆಯನ್ನು ಮಾಡುತ್ತಿದ್ದರು. ಸಕ್ಕರೆ ಕಾರ್ಖಾನೆ ತೆಗೆದು ಸಾಕಷ್ಟು ಜನರಿಗೆ ಉದ್ಯೋಗ ನೀಡಿದ ಮಹಾನ್‌ ವ್ಯಕ್ತಿ ಆಗಿದ್ದರು. ಉಮೇಶ್‌ ಕತ್ತಿ ಅವರ ಆತ್ಮಕ್ಕೆ ದೇವರು ಶಾಂತಿ‌ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದರು.

Former CM Jagadish Shettar condoles to Death of Umesh Katti

ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಜವಳಿ, ಕೈಮಗ್ಗ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪವನ್ನು ಸೂಚಿಸಿದ್ದಾರೆ. ರಾಜ್ಯದ ಹಿರಿಯ ರಾಜಕಾರಣಿ, ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿದ್ದ ಉಮೇಶ್‌ ಕತ್ತಿಯವರ ನಿಧನದಿಂದ ರಾಜ್ಯ ಬಡವಾಗಿದೆ. ಉಮೇಶ್‌ ಕತ್ತಿ ಅವರ ನೇರ ಮಾತುಕತೆಯಿಂದ ರಾಜೀ ಇಲ್ಲದ ಜೀವನ ಸಾಗಿಸಿದ್ದರು. ನಾನು ರಾಜಕಾರಣಕ್ಕೆ ಬರುವುದಕ್ಕಿಂತಲೂ ಮೊದಲು ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೆ. ಬಹಳ ವರ್ಷದಿಂದ ಅವರನ್ನು ಹತ್ತಿರದಿಂದ ನೋಡಿಕೊಂಡು ಬಂದಿದ್ದೇನೆ. ಉಮೇಶ್‌ ಕತ್ತಿ ಅವರ ನಿಧನದಿಂದ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ ಆಗಿದೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಉಮೇಶ್‌ ಕತ್ತಿ ಅವರ ನಿಧನದಿಂದ ವೈಯಕ್ತಿಕವಾಗಿ ತೀವ್ರ ನೋವಾಗಿದೆ ಎಂದರು.

Former CM Jagadish Shettar condoles to Death of Umesh Katti

ಉಮೇಶ್‌ ಕತ್ತಿ ನಿಧನಕ್ಕೆ ಆರಗ ಸಂತಾಪ

ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುತ್ತಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಮೇಶ್ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಃಖ ಆಗಿದೆ. ಅವರು ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಒಳ್ಳೆಯ ಸ್ವಭಾವದವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ದೇವರು ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಕೊಡಲಿ. ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+