• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿಯಲ್ಲಿ ವಿನಯ್ ಕುಲಕರ್ಣಿ ವಿಚಾರಣೆ

By Lekhaka
|

ಹುಬ್ಬಳ್ಳಿ, ನವೆಂಬರ್ 07: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಹುಬ್ಬಳ್ಳಿಗೆ ಕರೆತರಲಾಗಿದೆ.

ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿನ ಕೊಠಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಶನಿವಾರ ಬೆಳಿಗ್ಗೆ ಬೆಳಗ್ಗೆ 6.40ಕ್ಕೆ ಹಿಂಡಲಗಾ ಜೈಲಿಗೆ ಆಗಮಿಸಿದ ಸಿಬಿಐ ತಂಡ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದಿತ್ತು. ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿದ್ದ ಅಧಿಕಾರಿಗಳು ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದರು.

ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ. ನವೆಂಬರ್ 5ರಂದು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

   Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada

   ಇಂದು ವಿನಯ್ ಕುಲಕರ್ಣಿ ಜನ್ಮದಿನ: ನ.7ರಂದು ವಿನಯ್ ಕುಲಕರ್ಣಿ ಹುಟ್ಟುಹಬ್ಬದ ದಿನವಾಗಿದ್ದು, ಅವರ ಅನುಪಸ್ಥಿತಿಯಲ್ಲಿಯೇ ಅವರ ಭಿಮಾನಿಗಳು ಅವರ ಜನ್ಮದಿನ ಆಚರಿಸುತ್ತಿದ್ದಾರೆ. ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು ಹಂಪಲುಗಳನ್ನು ವಿತರಿಸಿದ್ದಾರೆ.

   English summary
   Former minister vinay kulkarni inquiry regarding dharwad zilla panchayat member yogesh gowa murder case at hubballi CAR Ground
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X