ಶಾಂತಿ ಕದಡಲು ಹುಬ್ಬಳ್ಳಿಯಲ್ಲಿ ಬಸ್ ಗೆ ಬೆಂಕಿ ಹಚ್ಚಲು ಯತ್ನ
ಹುಬ್ಬಳ್ಳಿ, ಸೆಪ್ಟೆಂಬರ್ 05 : ನಾಲ್ವರು ದುಷ್ಕರ್ಮಿಗಳು ಹುಬ್ಬಳ್ಳಿಯ ನೇಕಾರನಗರದಲ್ಲಿ ಮಂಗಳವಾರ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.
ಎರಡು ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಬಸ್ ಗೆ ತಗುಲುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ 'ಮಂಗಳೂರು ಚಲೋ' ಗಲಾಟೆಯಲ್ಲಿ ಗಲಭೆ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳೂರು ಚಲೋ ಬಿಜೆಪಿ ಜಾಥಾಕ್ಕೆ ಹುಬ್ಬಳ್ಳಿಯಲ್ಲಿ ಪೊಲೀಸರು ತಡೆದಿದ್ದಾರೆ. ಈ ಹಿನ್ನಲೆಯಲ್ಲಿ ಗಲಾಟೆ ಎದ್ದಿದೆ ಇದರ ಮಧ್ಯೆಯೇ ಕೆಲ ಕಿಡಿಗೇಡಿಗಳು ಬಸ್ ಗೆ ಬೆಂಕಿಗೆ ಶಾಂತಿ ಕದಡಲು ಯತ್ನಿಸಿದ್ದಾರೆ.
ಬೈಕ್ ಜಾಥಾ ಹೊರಟಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಸದರ ಪ್ರಲ್ಲಾದ್ ಜೋಷಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.












Click it and Unblock the Notifications