ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ದಂಧೆ; ನಾಲ್ವರು ಮಹಿಳೆಯರ ರಕ್ಷಣೆ

ಹುಬ್ಬಳ್ಳಿ, ಮಾರ್ಚ್ 08: ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ದಂಧೆ ಜೋರಾಗಿ ಸಾಗಿದೆ. ಸ್ಪಾ ಹಾಗೂ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಾಂಸದ ದಂಧೆಯೂ ಎಗ್ಗಿಲ್ಲದೆ ನಡೆಯುತ್ತಿದೆ.

ಹೀಗಾಗಿಯೇ ಸ್ಪಾ ಹಾಗೂ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿ ನಾಲ್ವರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್ ನ ನೇತ್ರಾವತಿ ಸ್ವ್ಕೇರ್ ನಲ್ಲಿ ಲೋಟಸ್ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ದ ಮಾಲೀಕ ತುಳಸಿದಾಸ ಬೋರಕರ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದ.

Prostitution In Hubballi; Protection Of Four Women

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾನಗರ ಪೊಲೀಸರು ಆರೋಪಿ ತುಳಸಿದಾಸನನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ದಾಳಿ ವೇಳೆ ನಗದು ಹಣ ಹಾಗೂ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ವಿದ್ಯಾನಗರ ಪೊಲೀಸರ ಈ ಕಾರ್ಯಾಚರಣೆಗೆ ಪೊಲೀಸ್ ಆಯುಕ್ತ ಆರ್.ದಿಲೀಪ್ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಣೆ ಮಾಡಿದ್ದಾರೆ. ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+