ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ದಂಧೆ; ನಾಲ್ವರು ಮಹಿಳೆಯರ ರಕ್ಷಣೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮಾರ್ಚ್ 08: ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ದಂಧೆ ಜೋರಾಗಿ ಸಾಗಿದೆ. ಸ್ಪಾ ಹಾಗೂ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಾಂಸದ ದಂಧೆಯೂ ಎಗ್ಗಿಲ್ಲದೆ ನಡೆಯುತ್ತಿದೆ.

ಹೀಗಾಗಿಯೇ ಸ್ಪಾ ಹಾಗೂ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿ ನಾಲ್ವರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ತುಂಬು ಗರ್ಭಿಣಿಯಾದರೂ ಕೆಲಸಕ್ಕೆ ಹಾಜರಾದ ಲೇಡಿ ಇನ್ಸ್‌ಪೆಕ್ಟರ್ತುಂಬು ಗರ್ಭಿಣಿಯಾದರೂ ಕೆಲಸಕ್ಕೆ ಹಾಜರಾದ ಲೇಡಿ ಇನ್ಸ್‌ಪೆಕ್ಟರ್

ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್ ನ ನೇತ್ರಾವತಿ ಸ್ವ್ಕೇರ್ ನಲ್ಲಿ ಲೋಟಸ್ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ದ ಮಾಲೀಕ ತುಳಸಿದಾಸ ಬೋರಕರ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದ.

Prostitution In Hubballi; Protection Of Four Women

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾನಗರ ಪೊಲೀಸರು ಆರೋಪಿ ತುಳಸಿದಾಸನನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ದಾಳಿ ವೇಳೆ ನಗದು ಹಣ ಹಾಗೂ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

15 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಮಗ!15 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಮಗ!

ವಿದ್ಯಾನಗರ ಪೊಲೀಸರ ಈ ಕಾರ್ಯಾಚರಣೆಗೆ ಪೊಲೀಸ್ ಆಯುಕ್ತ ಆರ್.ದಿಲೀಪ್ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಣೆ ಮಾಡಿದ್ದಾರೆ. ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

English summary
Hubballi Vidyanagara police raided a prostitution racket in the name of a beauty parlor and arrested one man and rescued four women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X