ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ, ಸೆ. 27: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಆರು ಮಹಾನಗರಗಳಲ್ಲಿ ವಿಧಿವಿಜ್ಞಾನ (ಎಫ್ಎಸ್ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕು ಸ್ಥಾಪನೆಯನ್ನು ಮಾಡಿ ಮಾತನಾಡಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದ್ದು, ಪುಣೆಯ ಕಡಕ್‌ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್.ಡಿ.ಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರವನ್ನೂ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಹುಬ್ಬಳ್ಳಿ-ಧಾವವಾಡ ಅವಳಿ ನಗರದಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಬಗ್ಗೆ ಕಠಿಣ ಸೂಚನೆಯನ್ನು ಪೊಲೀಸ್ ಅಧಿಕಾರಿಗಳಿಗೆ ಕೊಟ್ಟಿದ್ದಾರೆ.

ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ!
ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಫೊರೆನ್ಸಿಕ್ ಲ್ಯಾಬ್) ಆರಂಭಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ಆಫೀಸರ್ ಆನ್ ಕ್ರೈಂ ಸೀನ್ ಎನ್ನುವ ಕಲ್ಪನೆ ಆಧಾರದ ಮೇಲೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. 16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‌ಪೆಕ್ಟರುಗಳ ನೇಮಕಾತಿಯನ್ನು ಇದೇ ಮಾದರಿಯಲ್ಲಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಮ್ಮೂರಿನ ಕಾನೂನು ಸುವ್ಯವಸ್ಥೆ ಬಗ್ಗೆ ಖಡಕ್ ಸೂಚನೆ!
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕಾನೂನು ಸುವ್ಯವಸ್ಥೆ ಮುಖ್ಯ. ಇಲ್ಲಿನ ಜನ ಶಾಂತಿ ಪ್ರಿಯರು ಕೆಲವು ಕಿಡಗೇಡಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನವಾಗುತ್ತಿದೆ. ಅವುಗಳನ್ನು ನಿಯಂತ್ರಿಸುವುದು ಅಧಿಕಾರಿಗಳಿಂದ ಸಾಧ್ಯವಿದೆ. ಪೊಲೀಸ್ ಆಯುಕ್ತರು ಠಾಣೆಗಳಿಗೆ ತೆರಳಿ ಪರಿಶೀಲನೆ ಮಾಡಬೇಕು. ಡಿವೈಎಸ್‌ಪಿ ಹಾಗೂ ಮೇಲಿನ ಅಧಿಕಾರಿಗಳು ಕೇವಲ ಕಚೇರಿ, ಆಡಳಿತ ಕೆಲಸಗಳಿಗೆ ಮಹತ್ವ ನೀಡದೆ ಪ್ರತಿಯೊಂದು ಠಾಣೆಗೆ ಭೇಟಿ ಕೊಡಬೇಕು ಎಂದು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಪ್ರತಿವರ್ಷ ನೂರು ಠಾಣೆಗಳ ನಿರ್ಮಾಣ!
ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಕರ್ಯ ಕೊಟ್ಟು ಸುಧಾರಣೆ ಮಾಡಬೇಕು. ಪ್ರತಿ ವರ್ಷ ನೂರು ಠಾಣೆಗಳಂತೆ ಮುಂದಿನ ಐದು ವರ್ಷದಲ್ಲಿ 5 ನೂರು ಪೊಲೀಸ್ ಠಾಣೆ ನಿರ್ಮಿಸುವ ಗುರಿ ಇದೆ. 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗುವುದು. ಶ್ವಾನಗಳ ತರಬೇತಿಗೆ ಡಾಗ್ ಕ್ಯಾನಲ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.
Recommended Video

ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ
ಗೃಹ ಸಚಿವರಾದ ಆರಗ ಜ್ಞಾನೇಂದ್ರ ಮಾತನಾಡಿ, "ಧಾರವಾಡ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪೋಲಿಸ್ ಠಾಣೆ, ಸಂಚಾರಿ ಠಾಣೆ, ವಸತಿ ಗೃಹಗಳನ್ನು ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಗಿದೆ. ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಅನುಮೋದನೆ ಆಗಿದೆ. ಕಾಗ್ನಿಜಿಬಲ್ ಪ್ರಕರಣ ಎಂದು ದಾಖಲಿಸಿಕೊಂಡು, ಜಾಮೀನು ರಹಿತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್‌ಲೈನ್ ಜೂಜುಕೋರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ" ಎಂದು ತಿಳಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications