ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

|
Google Oneindia Kannada News

ಹುಬ್ಬಳ್ಳಿ, ಸೆ. 27: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಆರು ಮಹಾನಗರಗಳಲ್ಲಿ ವಿಧಿವಿಜ್ಞಾನ (ಎಫ್ಎಸ್ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕು ಸ್ಥಾಪನೆಯನ್ನು ಮಾಡಿ ಮಾತನಾಡಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದ್ದು, ಪುಣೆಯ ಕಡಕ್‌ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್.ಡಿ.ಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರವನ್ನೂ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಹುಬ್ಬಳ್ಳಿ-ಧಾವವಾಡ ಅವಳಿ ನಗರದಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಬಗ್ಗೆ ಕಠಿಣ ಸೂಚನೆಯನ್ನು ಪೊಲೀಸ್ ಅಧಿಕಾರಿಗಳಿಗೆ ಕೊಟ್ಟಿದ್ದಾರೆ.

ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ!

ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ!

ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಫೊರೆನ್ಸಿಕ್ ಲ್ಯಾಬ್) ಆರಂಭಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ಆಫೀಸರ್ ಆನ್ ಕ್ರೈಂ ಸೀನ್ ಎನ್ನುವ ಕಲ್ಪನೆ ಆಧಾರದ ಮೇಲೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ.‌ 16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‌ಪೆಕ್ಟರುಗಳ ನೇಮಕಾತಿಯನ್ನು ಇದೇ ಮಾದರಿಯಲ್ಲಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಮ್ಮೂರಿನ ಕಾನೂನು ಸುವ್ಯವಸ್ಥೆ ಬಗ್ಗೆ ಖಡಕ್ ಸೂಚನೆ!

ತಮ್ಮೂರಿನ ಕಾನೂನು ಸುವ್ಯವಸ್ಥೆ ಬಗ್ಗೆ ಖಡಕ್ ಸೂಚನೆ!

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕಾನೂನು ಸುವ್ಯವಸ್ಥೆ ಮುಖ್ಯ. ಇಲ್ಲಿನ ಜನ ಶಾಂತಿ ಪ್ರಿಯರು ಕೆಲವು ಕಿಡಗೇಡಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನವಾಗುತ್ತಿದೆ. ಅವುಗಳನ್ನು ನಿಯಂತ್ರಿಸುವುದು ಅಧಿಕಾರಿಗಳಿಂದ ಸಾಧ್ಯವಿದೆ. ಪೊಲೀಸ್ ಆಯುಕ್ತರು ಠಾಣೆಗಳಿಗೆ ತೆರಳಿ ಪರಿಶೀಲನೆ ಮಾಡಬೇಕು. ಡಿವೈ‌ಎಸ್‌ಪಿ ಹಾಗೂ ಮೇಲಿನ ಅಧಿಕಾರಿಗಳು ಕೇವಲ ಕಚೇರಿ, ಆಡಳಿತ ಕೆಲಸಗಳಿಗೆ ಮಹತ್ವ ನೀಡದೆ ಪ್ರತಿಯೊಂದು ಠಾಣೆಗೆ ಭೇಟಿ ಕೊಡಬೇಕು ಎಂದು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಪ್ರತಿವರ್ಷ ನೂರು ಠಾಣೆಗಳ ನಿರ್ಮಾಣ!

ರಾಜ್ಯದಲ್ಲಿ ಪ್ರತಿವರ್ಷ ನೂರು ಠಾಣೆಗಳ ನಿರ್ಮಾಣ!

ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಕರ್ಯ ಕೊಟ್ಟು ಸುಧಾರಣೆ ಮಾಡಬೇಕು. ಪ್ರತಿ ವರ್ಷ ನೂರು ಠಾಣೆಗಳಂತೆ ಮುಂದಿನ ಐದು ವರ್ಷದಲ್ಲಿ 5 ನೂರು ಪೊಲೀಸ್ ಠಾಣೆ ನಿರ್ಮಿಸುವ ಗುರಿ ಇದೆ. 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗುವುದು. ಶ್ವಾನಗಳ ತರಬೇತಿಗೆ ಡಾಗ್ ಕ್ಯಾನಲ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

Recommended Video

ಆರ್ಡರ್ ಫುಡ್ ತರ್ತಿದ್ದ ಡ್ರೋನ್ ಮೇಲೆ ಕಾಗೆ ದಾಳಿ ಮಾಡಿ ಏನ್ ಮಾಡ್ತು ನೋಡಿ | Oneindia Kannada
ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ

ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ

ಗೃಹ ಸಚಿವರಾದ ಆರಗ ಜ್ಞಾನೇಂದ್ರ ಮಾತನಾಡಿ, "ಧಾರವಾಡ ಜಿಲ್ಲೆಯಲ್ಲಿ 21 ಕೋಟಿ ರೂ‌. ವೆಚ್ಚದಲ್ಲಿ ಪೋಲಿಸ್ ಠಾಣೆ, ಸಂಚಾರಿ ಠಾಣೆ, ವಸತಿ ಗೃಹಗಳನ್ನು ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಗಿದೆ. ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಅನುಮೋದನೆ ಆಗಿದೆ. ಕಾಗ್ನಿಜಿಬಲ್ ಪ್ರಕರಣ ಎಂದು ದಾಖಲಿಸಿಕೊಂಡು, ಜಾಮೀನು ರಹಿತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್‌ಲೈನ್ ಜೂಜುಕೋರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ" ಎಂದು ತಿಳಿಸಿದರು.

English summary
Chief Minister Basavaraj Bommai today said that Forensic Science Laboratories would be set up 6 cities of the State including Kalaburagi, Hubballi-Dharwad and Mysuru to facilitate speedy investigation and crime detection. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X