ಗಂಗೂಬಾಯಿ ಹಾನಗಲ್ ಮೊಮ್ಮಗ ಮನೋಜ್ ನಿಧನ

ಹುಬ್ಬಳ್ಳಿ, ಮೇ 15: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗ ಮನೋಜ್ ಹಾನಗಲ್ (54) ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಇಲ್ಲಿ ಹೃದಯಾಘಾತದಿಂದ ನಿಧನರಾದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ವೃತ್ತಿಯಿಂದ ವಕೀಲರಾಗಿದ್ದ ಮನೋಜ್ ಹಾನಗಲ್ ಅವರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಲ್ಲಿ ಸಕ್ರಿಯವಾಗಿ ತೊಡಿಸಿಕೊಂಡಿದ್ದರು. ಈದ್ಗಾ ಮೈದಾನದ ಹೋರಾಟದಲ್ಲಿಯೂ ಭಾಗವಹಿಸಿದ್ದರು.

ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದರಿಂದ ಅಸ್ವಸ್ಥರಾಗಿದ್ದ ಅವರನ್ನು ಮಂಗಳವಾರ ಬೆಳಿಗ್ಗೆ 9.30ರ ಸುಮಾರಿಗೆ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

Grandson of Gangubai Hangal Manoj Hangal died at 54 heart attack in hubballi

ಮನೋಜ್ ಅವರು ಜಿ.ಜಿ. ಕಾಮರ್ಸ್ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಬಳಿಕ ಸಕ್ರಿ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಕೆಲವು ಕಾಲ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು.

ಅವರಿಗೆ ತಂದೆ ಬಾಬುರಾವ್ ಹಾನಗಲ್, ತಾಯಿ ಲಲಿತಾ ಹಾನಗಲ್, ಸಹೋದರ ಮತ್ತು ಇಬ್ಬರು ಸಹೋದರಿಯರು ಇದ್ದಾರೆ. ಮನೋಜ್ ಅವರು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. 2005ರಲ್ಲಿ ಅವರು ಗಂಗೂಬಾಯಿ ಹಾನಗಲ್ ಸಂಗೀತ ವಸ್ತು ಸಂಗ್ರಹಾಲಯವನ್ನು ಆರಂಭಿಸಿದ್ದರು. ಅವರನ್ನು ಅನೇಕ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.

ರಾಜಕೀಯ ರಂಗಕ್ಕೂ ಕಾಲಿರಿಸಿದ್ದ ಅವರು ಒಮ್ಮೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಬುಧವಾರ ಕೇಶವಾಪುರದ ಮುಕ್ತಿಧಾಮದಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+