ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗದ ಸಮೀಕ್ಷೆಗೆ ಒಪ್ಪಿಗೆ

|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 08: ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ಶಿರಸಿ ಮೂಲಕ ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಬಹುವರ್ಷಗಳ ಬೇಡಿಕೆಯಾಗಿದೆ. ಈ ಮಾರ್ಗದ ಸಮೀಕ್ಷೆಗೆ ಶೀಘ್ರದಲ್ಲೇ ಆರಂಭವಾಗಲಿದೆ.

ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. ತಾಳಗುಪ್ಪ-ಸಿದ್ದಾಪುರ-ಶಿರಸಿ-ಮುಂಡಗೋಡ-ತಡಸ್ ಮಾರ್ಗವಾಗಿ ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಬೇಡಿಕೆಯಾಗಿತ್ತು ಎಂದು ಹೇಳಿದ್ದಾರೆ.

ಹುಬ್ಬಳ್ಳಿ-ಧಾರವಾಡ ನಡುವೆ 30 ನಿಮಿಷದಲ್ಲಿ ಪ್ರಯಾಣಿಸಿ ಹುಬ್ಬಳ್ಳಿ-ಧಾರವಾಡ ನಡುವೆ 30 ನಿಮಿಷದಲ್ಲಿ ಪ್ರಯಾಣಿಸಿ

ಈ ಮಾರ್ಗದಲ್ಲಿ ಸುಧಾರಿತ ತಂತ್ರಜ್ಞಾನ ಆಧಾರಿತ ಡ್ರೋನ್ ಸರ್ವೇ ಕಾರ್ಯ ನಿರ್ವಹಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಶೀಘ್ರದಲ್ಲಿಯೇ ಸಮೀಕ್ಷೆ ಕಾರ್ಯ ಆರಂಭವಾಗಲಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಪೋಸ್ಟ್ ಹಾಕಿದ್ದಾರೆ.

ಮುಂಗಡ ಟಿಕೆಟ್ ಬುಕ್ಕಿಂಗ್; ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಮುಂಗಡ ಟಿಕೆಟ್ ಬುಕ್ಕಿಂಗ್; ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

Green Signal For Drone Survey Of Talguppa-Hubballi Railway Line

ಸುರೇಶ್ ಅಂಗಡಿ ಶ್ರಮ; ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರಿಗೆ ಈ ಕುರಿತು ಮನವಿಯನ್ನು ಸಲ್ಲಿಸಲಾಗಿತ್ತು. ಪ್ರಸ್ತಾವನೆ ಅನ್ವಯ ಈ ಮಾರ್ಗದ ಪಿ.ಇ.ಟಿ ಸರ್ವೇ ಕಾರ್ಯಕ್ಕೆ ಆದೇಶ ನೀಡಿ ಅನುದಾನ ಬಿಡುಗಡೆಯಾಗಿದೆ.

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ಈ ಬಗ್ಗೆ ಮಾಹಿತಿ ನೀಡುವಾಗ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದಿ. ಸುರೇಶ್ ಅಂಗಡಿ ಅವರಿಗೆ ಮನವಿ ಸಲ್ಲಿಸುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಸುರೇಶ್ ಅಂಗಡಿ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಬೆಂಗಳೂರು ನಗರದಿಂದ ತಾಳಗುಪ್ಪದ ತನಕ ರೈಲು ಸಂಚಾರ ನಡೆಸುತ್ತಿದೆ. ಪ್ರಸ್ತಾವಿತ ಮಾರ್ಗ ನಿರ್ಮಾಣಗೊಂಡರೆ ಉತ್ತರ ಮತ್ತು ದಕ್ಷಿಣ ಕರ್ನಾಟಕವನ್ನು ಸುಲಭವಾಗಿ ಸಂಪರ್ಕಿಸಬಹುದು. ಪ್ರವಾಸೋದ್ಯಮಕ್ಕೂ ಸಹ ಉತ್ತೇಜನ ಸಿಗಲಿದೆ.

ಉತ್ತರ ಕನ್ನಡ ಜಿಲ್ಲೆಗೆ ಈ ರೈಲು ಯೋಜನೆಯಿಂದ ಹೆಚ್ಚು ಉಪಯೋಗ ಸಿಗಲಿದೆ. ಶಿವಮೊಗ್ಗದಿಂದ ಜನರು ಹುಬ್ಬಳ್ಳಿಗೆ ಸಂಚಾರ ನಡೆಸಲು ಬಸ್, ಖಾಸಗಿ ವಾಹನಗಳನ್ನು ಅವಲಂಬಿಸುವುದು ತಪ್ಪಲಿದೆ. ಸಮೀಕ್ಷೆ ಮುಗಿದ ಬಳಿಕ ರೈಲು ಮಾರ್ಗ ನಿರ್ಮಾಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಹಿಂದೆ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಇದೇ ಮಾರ್ಗದ ಸಮೀಕ್ಷೆಗಾಗಿ ಅನುದಾನ ತಂದಿದ್ದರು. ಆದರೆ, ಬಳಿಕ ತೋರಿದ ನಿರಾಸಕ್ತಿಯಿಂದಾಗಿ ಅನುದಾನ ವಾಪಸ್ ಹೋಗಿತ್ತು. ಈ 2ನೇ ಬಾರಿ ಅನುದಾನ ಮಂಜೂರಾಗಿದೆ.

Recommended Video

Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

ತಾಳಗುಪ್ಪ-ಸಿದ್ದಾಪುರ-ಶಿರಸಿ-ಮುಂಡಗೋಡ-ಹುಬ್ಬಳ್ಳಿ ಮಾರ್ಗದ ಸಮೀಕ್ಷೆ ನಡೆಸಲು 79 ಲಕ್ಷ ರೂ. ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಮೀಕ್ಷೆ ಆರಂಭವಾಗಲಿದೆ.

English summary
Railway broad approved for the drone survey of Talguppa-Hubballi railway line. Train will run via Siddapura and Sirsi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X