ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಅವರ ಆಲಮಟ್ಟಿ ಬಾಗಿನ ಕಾರ್ಯಕ್ರಮ ರದ್ದು

By Gururaj
|
Google Oneindia Kannada News

ಹುಬ್ಬಳ್ಳಿ, ಆಗಸ್ಟ್ 12 : ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮ ರದ್ದಾಗಿದೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು.

ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮಾಡಿದ ಬಳಿಕ ಕುಮಾರಸ್ವಾಮಿ ಅವರು ವಿಜಯಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಹವಾಮಾನ ವೈಫರಿತ್ಯದ ಕಾರಣ ಪ್ರವಾಸ ರದ್ದಾಗಿದೆ. ಹೆಲಿಕಾಪ್ಟರ್ ಟೇಕಾಫ್‌ಗೆ ಪೈಲೆಟ್ ನಿರಾಕರಿಸಿದರು.

ಬಾಗಲಕೋಟೆಯ ಮುಚಖಂಡಿ ಕೆರೆಗೆ ವೈಭವದ ಕಾಲ!ಬಾಗಲಕೋಟೆಯ ಮುಚಖಂಡಿ ಕೆರೆಗೆ ವೈಭವದ ಕಾಲ!

HD Kumaraswamy Alamatti bagina program cancelled

ಹೆಚ್ಚಿನ ಮಳೆ, ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ಆದ್ದರಿಂದ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಮುಖ್ಯಮಂತ್ರಿಗಳು ಮೈದುಂಬಿದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಬೇಕಿತ್ತು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮುಂತಾದ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.

ಆಲಮಟ್ಟಿಯಿಂದ ಕಾರವಾರಕ್ಕೆ ದೋಣಿ ಪ್ರಯಾಣಆಲಮಟ್ಟಿಯಿಂದ ಕಾರವಾರಕ್ಕೆ ದೋಣಿ ಪ್ರಯಾಣ

'ಹೆಚ್ಚಿನ ಮಳೆ ಮತ್ತು ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಆಲಮಟ್ಟಿಗೆ ಬಾಗಿನ ನೀಡುವ ಕಾರ್ಯಕ್ರಮ ರದ್ದು ಮುಂದೂಡಲಾಗಿದೆ' ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಆಗಸ್ಟ್ ಅಂತ್ಯದಲ್ಲಿ ಮತ್ತೊಂದು ದಿನವನ್ನು ನಿಗದಿ ಮಾಡಲಾಗುತ್ತದೆ.

ಹುಬ್ಬಳ್ಳಿಯಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಅಲ್ಲಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

English summary
Chief Minister H.D.Kumaraswamy Bagina to the Krishna at the Alamatti dam canceled due to bad weather and CM return to Bengaluru from Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X