• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೆಟ್ರೋಲ್, ಡೀಸೆಲ್ ಸೆಸ್ ಹೆಚ್ಚಳ ಸಮರ್ಥಿಸಿಕೊಂಡ ಕುಮಾರಸ್ವಾಮಿ

|

ಹುಬ್ಬಳ್ಳಿ, ಜನವರಿ 5: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಹೆಚ್ಚಿಸಿದ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ರಾಜ್ಯದಲ್ಲಿ ತೈಲ ದುಬಾರಿ

ರಾಜ್ಯದಲ್ಲಿನ ಪೆಟ್ರೋಲ್ ಬೆಲೆ, ನೆರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯೇ ಇದೆ. ರಾಷ್ಟ್ರವ್ಯಾಪಿ ತೈಲ ಬೆಲೆ ಏರಿಕೆಯಾಗಿದ್ದಾಗ ಮಾರಾಟ ಮೇಲಿನ ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂ.ಗೆ ಇಳಿಸಲಾಗಿತ್ತು ಎಂದು ಅವರು ಸಮರ್ಥನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದ ಕೊಡುಗೆ: ಎಲ್ ಪಿಜಿ ದರ ಇಳಿಕೆ

ಸೆಸ್ ಏರಿಕೆಯಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 1.30 ರೂ.ನಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ 69.21 ರೂ.ನಿಂದ 70.84 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವು 63.01 ನಿಂದ 64.66ರಷ್ಟು ತುಟ್ಟಿಯಾಗಿದೆ. ಇದರಿಂದ ರಾಜ್ಯದ ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬಿದ್ದಂತಾಗಿದೆ.

ಪೆಟ್ರೋಲ್ ಮೇಲಿನ ತೆರಿಗೆಯನ್ನು 3.25% ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು 3.27% ರಷ್ಟು ಹೆಚ್ಚಳ ಮಾಡಿ ಕುಮಾರಸ್ವಾಮಿ ಸೂಚನೆ ಹೊರಡಿಸಿದ್ದರು.

ಇಂಧನ ದರ ಕುಸಿತ: ಈಗ 9 ತಿಂಗಳಲ್ಲೇ ಅತ್ಯಧಿಕ ಕಡಿಮೆ ಮೊತ್ತ

ಸೆಪ್ಟೆಂಬರ್ ತಿಂಗಳಿನಿಂದ ಶೇ 28.75 ರಷ್ಟಿದ್ದ ಪೆಟ್ರೋಲ್ ಮೇಲಿನ ತೆರಿಗೆ ಶೇ 32ಕ್ಕೆ ಏರಿಕೆಯಾಗಿದೆ. ಡೀಸೆಲ್ ಮೇಲಿನ ತೆರಿಗೆ ಶೇ 17.73ರಿಂದ ಶೇ 21ಕ್ಕೆ ಹೆಚ್ಚಳವಾಗಿದೆ.

English summary
Chief Minister HD Kumaraswamy on Saturday defended the decision of hiking cess on Petrol and Diesel. Compared to other states the fuel price is low in Karnataka, he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X