ಕೇಂದ್ರ ಸಚಿವನಾಗಿ ದರ್ಶನ್ ಪ್ರಕರಣ ಬಗ್ಗೆ ಮಾತನಾಡುವುದು ಸರಿಯಲ್ಲ: HDK
ಹುಬ್ಬಳ್ಳಿ, ಜೂನ್ 18: ಸದ್ಯ ಕರ್ನಾಟಕದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಮೇಲಿನ ಕೊಲೆ ಪ್ರಕರಣ ಬಗ್ಗೆ ಚರ್ಚೆಗಳು ಆಗುತ್ತಿವೆ. ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿಯನ್ನು ಕಿಡಿಗೇಡಿಗಳು ಎಳೆತಂದಿದ್ದರು. ಇದೀಗ ಪ್ರಕರಣ ಸಂಬಂಧ ಕೇಂದ್ರ ಎಚ್‌ಡಿ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಯವರು ಸುದ್ದಿಗಾರರ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನುವ ಸರಿಯಾಗಿ ತನಿಖೆ ಆಗಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಇದೇ ವೇಳೆ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವ ಗೋಜಿಗೆ ಹೋಗಲಿಲ್ಲ.
ದರ್ಶನ ಬಂಧನ ಪ್ರಕರಣದಲ್ಲಿ ಎಚ್‌ಡಿಕೆ ಹೆಸರು ಥಳಕು
ಜೂನ್ 11ರಂದು ನಟ ದರ್ಶನ್ ಬಂಧನವಾಗುತ್ತಿದ್ದಂತೆ ಇದೊಂದು ರಾಜಕೀಯ ದ್ವೇಷ ಬಂಧನ ಎಂದೆಲ್ಲ ಹೇಳಲಾಗಿತ್ತು. ಜೆಡಿಎಸ್ ವಿರುದ್ಧದ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡಿದ್ದರು. ಹೀಗಾಗಿ ಅದರ ಸೇಡನ್ನು ಕುಮಾರಸ್ವಾಮಿಯವರು ತೀರಿಸಿಕೊಳ್ಳುತ್ತಿದ್ದಾರೆ ಎಂದೆಲ್ಲ ಕಿಡಿಗೇಡಿಗಳು ಹೇಳಿದ್ದಾರೆ.
ರಾಜ್ಯದ ಕೈಗಾರಿಕೆ ವಲಯ ಅಭಿವೃದ್ಧಿಗೆ ಆಧ್ಯತೆ
ಕೇಂದ್ರ ಸಚಿವನಾದ ಬಳಿಕ ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದೇನೆ. ಕೈಗಾರಿಕೆ ಇಲಾಖೆಯಲ್ಲಿ ಹೊಸ ಆಯಾಮ ತರಲು, ರಾಜ್ಯದ ಅಭಿವೃದ್ಧಿ ಶ್ರಮಿಸಲು ಬಯಸುತ್ತೇನೆ ಎಂದು ಹೇಳಿದರು.

ಕರ್ನಾಟಕ ಮುಖ್ಯಮಂತ್ರಿ ಸೇವೆ ಸಲ್ಲಿಸಿದ ಅನುಭವ ಇದೆ. ಇದು ಸಹ ಕೇಂದ್ರ ಸರ್ಕಾರದ ಜವಾಬ್ದಾರಿ ನಿರ್ವಹಣೆಗೆ ಸಹಕಾರಿಯಾಗುತ್ತದೆ. ಈ ಮೂಲಕ ರಾಜ್ಯದಲ್ಲಿ ಕೈಗಾರಿಕೆಗೆ ಉತ್ತೇಜನ ನೀಡುವಲ್ಲಿ ಅವರ ಸಿದ್ಧತೆ ಆರಂಭಿಸಿದ್ದರ ಮುನ್ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ
ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಆಕ್ರೋಶ- ಏಕಾಏಕಿ ಪೆಟ್ರೋಲ್ ಡಿಸೇಲ್ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿ ಅವರು ಇದೊಂದು ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ಳತ್ತಾ ಇದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ನಾಲ್ಕು ತಿಂಗಳಿಗೆ ಎರಡು ಸಾವಿರ ರೂ. ಹಣ ನೀಡಲಾಗುತ್ತಿದೆ. ಈಗ 16 ಕಂತುಗಳಲ್ಲಿ ನೀಡಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ.












Click it and Unblock the Notifications