ಬಿಸಿಲಿನ ಬೇಗೆಗೆ ಬೆಂದಿದ್ದ ಹುಬ್ಬಳ್ಳಿ ಜನರಿಗೆ ತಂಪೆರೆದ ಮಳೆರಾಯ, ಮತ್ತೊಂದೆಡೆ ಧರೆಗುರುಳಿದ ಮರಗಳು
ಹುಬ್ಬಳ್ಳಿ, ಮೇ, 09: ಬಿಸಿಲಿನ ತಾಪಕ್ಕೆ ಬೆಂದು ಹೋಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿ ಜನರಿಗೆ ಇಂದು ಮಳೆರಾಯನ ತಂಪೆರೆದಿದ್ದಾನೆ. ಮತ್ತೊಂದೆ ನಗರದಲ್ಲಿ ನಾಳೆ ನಡೆಯಲಿರುವ ವಿಧಾನಸಭೆ ಚುನಾವಣೆಯ ಮತದಾನಕ್ಕೂ ಅಡ್ಡುಯಾಗುವ ಸಾಧ್ಯತೆಯೂ ಕೂಡ ಹೆಚ್ಚಿದೆ ಎನ್ನಲಾಗಿದೆ.
ಹುಬ್ಬಳ್ಳಿಯಲ್ಲಿ ಇಂದು ಗುಡುಗು, ಸಹಿತ ಮಳೆಯಾಗಿದ್ದು, ಇದರಿಂದ ಇಷ್ಟು ದಿನ ಜಿಲ್ಲೆಯ ಜನ ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದ ಜನ ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಒಂದೆಡೆಯಾದರೇ, ಮತ್ತೊಂದೆಡೆ ಗುಡುಗು ಸಹಿತ ಮಳೆಯಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ನಗರದ ಬಹುತೇಕ ಕಡೆಗಳಲ್ಲಿ ರಸ್ತೆಯು ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ನವನಗರದ ಭಾಗದಲ್ಲಿ ಮಳೆಯಿಂದ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಮತ್ತೊಂದೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಸಂಚಾರ ವ್ಯತ್ಯಯ ಆಗಿದೆ.
ಕೇಶ್ವಾಪೂರದಲ್ಲಿ ವರುಣನ ಅಬ್ಬರಕ್ಕೆ ಮರವೊಂದು ಧರೆಗೆ ಉರುಳಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಒಂದಾಗಿರುವ ಕೇಶ್ವಾಪೂರದಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಇಲ್ಲಿನ ಜನರು ಆತಂಕಗೊಂಡಿದ್ದಾರೆ.
ರಾಜ್ಯದ ಮೇಲೂ ಬೀರಿದ ಮೋಚಾ ಚಂಡಮಾಡುತ
ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾಡುತ ಇದ್ದು, ಇದರ ಪ್ರಭಾವ ರಾಜ್ಯದ ಮೇಲೂ ಬೀರಿದೆ. ಆದ್ದರಿಂದ ಇಂದು ಕೂಡ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಈಗಾಗಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಅಭ್ಯರ್ಥಿಗಳಿಗೆ ಈಗ ಮಳೆಯದ್ದೇ ಚಿಂತೆಯಾಗಿದೆ.
ಅಲ್ಲದೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬೀಳುತ್ತಿದ್ದು, ಈ ಮಳೆ ವಾತಾವರಣವನ್ನೂ ಕೂಡ ತಣ್ಣಗೆ ಆಗುವಂತೆ ಮಾಡಿದೆ. ಇಂದು ಕೂಡ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 9ರಂದು ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ 08) ಕೂಡ ಸಾಧಾರಣ ಮಳೆಯಾಗಿದ್ದು, ಇದರಿಂದ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟಿದ್ದವು. ಅಲ್ಲದೆ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರೆಯುವ ಸಾಧ್ಯೆತೆಯಿದೆ ಎನ್ನಲಾಗಿದೆ. ಇನ್ನು ಕರಾವಳಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ ಸೇರಿದಂತೆ ವಿವಿಧೆಡೆ ನಿನ್ನೆ ರಾತ್ರಿ ಗುಡುಗು ಸಹಿತ ಮಳೆ ಬಿದ್ದಿದೆ.












Click it and Unblock the Notifications