ಭಾರೀ ಮಳೆ; ಚಾಲಕರು, ನಿರ್ವಾಹಕರಿಗೆ NWKRTC ಸೂಚನೆಗಳು
ಹುಬ್ಬಳ್ಳಿ, ಜುಲೈ 24; ಹುಬ್ಬಳ್ಳಿ, ಧಾರವಾಡ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಹಲವು ರಸ್ತೆಗಳು, ಸೇತುವೆಗಳು ಜಲಾವೃತಗೊಂಡಿವೆ. ಈ ಸಂದರ್ಭದಲ್ಲಿ ಬಸ್ ಸಂಚಾರ ನಡೆಸುವುದು ಸವಾಲಿನ ಕೆಲಸವೇ ಸರಿ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಭಾರೀ ಮಳೆ ಹಿನ್ನಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಚಾಲಕರು ಮತ್ತು ನಿರ್ವಾಹಕರಿಗೆ ಕೆಲವು ಸೂಚನೆಗಳನ್ನು ನೀಡಿದೆ.

ಒಂದು ವಾರದಿಂದ NWKRTC ವ್ಯಾಪ್ತಿಯ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಬಸ್ ಹಾಗೂ ಪ್ರಯಾಣಿಕರ ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆಗಳನ್ನು ಕೊಡಲಾಗಿದೆ.
ಹಲವಾರು ಕಡೆ ರಸ್ತೆಗೆ ಹಾನಿ; ಹುಬ್ಬಳ್ಳಿಯಲ್ಲಿ ಪ್ರಧಾನ ಘಟಕ ಹೊಂದಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹಲವಾರು ಕಡೆ ರಸ್ತೆಗಳು ಹದಗೆಟ್ಟಿವೆ, ಕೆಲವು ಕಡೆ ರಸ್ತೆ, ಸೇತುವೆಗಳು ಜಲಾವೃತವಾಗಿವೆ.
ಮಳೆಯ ನೀರು ರಸ್ತೆ, ಸೇತುವೆಗಳ ಮೇಲೆ ಹರಿಯುತ್ತಿದೆ. ಆದ್ದರಿಂದ ಬಸ್ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ. ಮಳೆ ನೀರಿನಿಂದ ಅವೃತವಾದ ರಸ್ತೆಯ ಗುಂಡಿಗಳ ಆಳದ ಅಂದಾಜು ಸಿಗುವುದಿಲ್ಲ. ಆದ್ದರಿಂದ ಚಾಲಕರು ಎಚ್ಚರ ವಹಿಸಬೇಕು. ಬಸ್ ನಿಯಂತ್ರಣ ತಪ್ಪದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ರಸ್ತೆಯ ಮೇಲೆ ಭಾರೀ ನೀರು ಹರಿಯುತ್ತಿದ್ದರೆ ಬಸ್ ಚಾಲನೆ ಮಾಡುವುದು ಅಪಾಯಕಾರಿಯಾಗಿದೆ. ಇಂತಹ ಸಂದರ್ಭಗಳಲ್ಲಿ ಎಚ್ಚರವಹಿಸಬೇಕು. ರಸ್ತೆ ಬದಿಯ ಮಣ್ಣು ಸಡಿಲಗೊಂಡಿರುತ್ತದೆ. ಬಸ್ ಅನ್ನು ಮುಖ್ಯ ರಸತೆಯಿಂದ ಪಕ್ಕದ ಮಣ್ಣಿನ ರಸ್ತೆಗೆ ಬಸ್ ಇಳಿಸುವಾಗ ಜಾಗೃತವಾಗಿರಿ ಎಂದು ತಿಳಿಸಲಾಗಿದೆ.
ಬಸ್‌ಗಳ ಸುರಕ್ಷಿತ ಚಾಲನೆ, ಪ್ರಯಾಣಿಕರ ಸುರಕ್ಷತೆಗಾಗಿ ನಿರ್ವಾಹಕರು ಚಾಲಕರಿಗೆ ಅಗತ್ಯ ಸಲಹೆ, ಸಹಕಾರ ನೀಡಬೇಕು ಎಂದು NWKRTC ಹೇಳಿದೆ. ರಸ್ತೆ, ಸೇತುವೆ ಮುಳುಗಡೆಗೊಂಡ ಅನೇಕ ಪ್ರದೇಶದಲ್ಲಿ ಜಿಲ್ಲಾಡಳಿತಗಳು ಬಸ್ ಸೇರಿದಂತೆ ಇತರ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿವೆ.
ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದ್ದರಿಂದ ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಸೋಮವಾರ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದ್ದರಿಂದ ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಸೋಮವಾರ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 24 ಮನೆಗಳಿಗೆ ಹಾನಿ ಆಗಿದೆ. ಮನೆ ಗೊಡೆ ಕುಸಿದು ಒಂದು ಜಾನುವಾರು ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ಹೇಳಿದೆ.












Click it and Unblock the Notifications