ಎಲ್ಲಾ ಪೊಲೀಸರಿಗೆ ವಸತಿ ಕಲ್ಪಿಸುವುದು ನನ್ನ ಕನಸು: ಆರಗ ಜ್ಞಾನೇಂದ್ರ
ಹುಬ್ಬಳ್ಳಿ, ಸೆ. 27: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದ್ದು, ಮೊದಲ ಹಂತದಲ್ಲಿ ಹತ್ತು ಸಾವಿರ ವಸತಿಗೃಹ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ.
ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ, ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಅಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಜ್ಯ ಸರಕಾರವು, ಎಲ್ಲ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆಯನ್ನು ಹೊಂದಿದೆ. ಮೊದಲ ಹಂತದಲ್ಲಿ 10,000 ವಸತಿಗೃಹ ಗಳ ನಿರ್ಮಾಣ ಕಾರ್ಯ ತೆಗೆದುಕೊಳ್ಳಲಾಗುದು. ಧಾರವಾಡ ಜಿಲ್ಲೆಯಲ್ಲಿ ಒಟ್ಟು 21 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹ ನಿರ್ಮಾಣ ಯೋಜನೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ಒಂದು ವರ್ಷದಲ್ಲಿ ಎರಡು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಮೂಲಕ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳೂ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಲಿವೆ ಎಂದು ಸಚಿವರು ತಿಳಿಸಿದರು.
ಪ್ರಸ್ತುತ ದಿನದಲ್ಲಿ 100ಕ್ಕೆ 49 ಸಿಬ್ಬಂದಿಗೆ ಸರ್ಕಾರದಿಂದ ವಸತಿ ಸೌಲಭ್ಯ ಒದಗಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಒದಗಿಸುವ ಕನಸು ಸದ್ಯದಲ್ಲಿಯೇ ನನಸಾಗಲಿದೆ. ಪೊಲೀಸ್ ಇಲಾಖೆಗೆ ಸುಮಾರು 250 ವಿಧಿ ವಿಜ್ಞಾಲಯ ತಜ್ಞರ ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಪರಾಧ ಪ್ರಕರಣಗಳ ತ್ವರಿತ ವಿಲೇವಾರಿಗೆ ಇದು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಆನ್‌ಲೈನ್ ಲಾಟರಿ ನಿಷೇಧ: ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಪಾಸು ಮಾಡಲಾಗಿದೆ. ಜೂಜು ಆಡುವುದು, ಆಡುವುದಕ್ಕೆ ಪ್ರೋತ್ಸಾಹ ನೀಡುವುದನ್ನು ಗಂಭೀರ ಸ್ವರೂಪದ ಅಪರಾಧ ಪ್ರಕರಣ ಎಂದು ಪರಿಗಣಿಸಲಾಗುತ್ತದೆ. ಜಾಮೀನು ರಹಿತ ತನಿಖೆಗೆ ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್‌ಲೈನ್ ಜೂಜುಕಾರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ ಎಂದು ಗೃಹ ಸಚಿವರು ತಿಳಿಸಿದರು.
ಔರಾದಕರ್ ವರದಿ ಜಾರಿಗೆ ತರಲಾಗುತ್ತಿದೆ. ಪೊಲೀಸರಿಗೆ ಇದರಿಂದ ಅನುಕೂಲವಾಗಿದೆ. 52 ಜನ ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು ಪೊಲೀಸ್ ಇಲಾಖೆ ಯ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಅಗ್ನಿ ಶಾಮಕ ದಳ ಬಲಪಡಿಸಲಾಗುತ್ತಿದೆ. ವಿದೇಶದಿಂದ ಉಪಕರಣಗಳನ್ನು ತರಿಸಿಕೊಂಡು ಸಶಸ್ತ್ರ ಘಟಕ ಬಲಪಡಿಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು. ಶಾಸಕ ಪ್ರಸಾದ ಅಬ್ಬಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications