ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲಾ ಪೊಲೀಸರಿಗೆ ವಸತಿ ಕಲ್ಪಿಸುವುದು ನನ್ನ ಕನಸು: ಆರಗ ಜ್ಞಾನೇಂದ್ರ

|
Google Oneindia Kannada News

ಹುಬ್ಬಳ್ಳಿ, ಸೆ. 27: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದ್ದು, ಮೊದಲ ಹಂತದಲ್ಲಿ ಹತ್ತು ಸಾವಿರ ವಸತಿಗೃಹ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ, ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಅಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಜ್ಯ ಸರಕಾರವು, ಎಲ್ಲ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆಯನ್ನು ಹೊಂದಿದೆ. ಮೊದಲ ಹಂತದಲ್ಲಿ 10,000 ವಸತಿಗೃಹ ಗಳ ನಿರ್ಮಾಣ ಕಾರ್ಯ ತೆಗೆದುಕೊಳ್ಳಲಾಗುದು. ಧಾರವಾಡ ಜಿಲ್ಲೆಯಲ್ಲಿ ಒಟ್ಟು 21 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹ ನಿರ್ಮಾಣ ಯೋಜನೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.

Home Minister Araga Jnanendra has promised that 10,000 police personnel will be accommodated

ಮುಂದಿನ ಒಂದು ವರ್ಷದಲ್ಲಿ ಎರಡು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಮೂಲಕ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳೂ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಲಿವೆ ಎಂದು ಸಚಿವರು ತಿಳಿಸಿದರು.

ಪ್ರಸ್ತುತ ದಿನದಲ್ಲಿ 100ಕ್ಕೆ 49 ಸಿಬ್ಬಂದಿಗೆ ಸರ್ಕಾರದಿಂದ ವಸತಿ ಸೌಲಭ್ಯ ಒದಗಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಒದಗಿಸುವ ಕನಸು ಸದ್ಯದಲ್ಲಿಯೇ ನನಸಾಗಲಿದೆ. ಪೊಲೀಸ್ ಇಲಾಖೆಗೆ ಸುಮಾರು 250 ವಿಧಿ ವಿಜ್ಞಾಲಯ ತಜ್ಞರ ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಪರಾಧ ಪ್ರಕರಣಗಳ ತ್ವರಿತ ವಿಲೇವಾರಿಗೆ ಇದು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

Home Minister Araga Jnanendra has promised that 10,000 police personnel will be accommodated

ಆನ್‌ಲೈನ್ ಲಾಟರಿ ನಿಷೇಧ: ಆನ್‌ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಪಾಸು ಮಾಡಲಾಗಿದೆ. ಜೂಜು ಆಡುವುದು, ಆಡುವುದಕ್ಕೆ ಪ್ರೋತ್ಸಾಹ ನೀಡುವುದನ್ನು ಗಂಭೀರ ಸ್ವರೂಪದ ಅಪರಾಧ ಪ್ರಕರಣ ಎಂದು ಪರಿಗಣಿಸಲಾಗುತ್ತದೆ. ಜಾಮೀನು ರಹಿತ ತನಿಖೆಗೆ ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್‌ಲೈನ್ ಜೂಜುಕಾರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ ಎಂದು ಗೃಹ ಸಚಿವರು ತಿಳಿಸಿದರು.

ಔರಾದಕರ್ ವರದಿ ಜಾರಿಗೆ ತರಲಾಗುತ್ತಿದೆ. ಪೊಲೀಸರಿಗೆ ಇದರಿಂದ ಅನುಕೂಲವಾಗಿದೆ. 52 ಜನ ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು ಪೊಲೀಸ್ ಇಲಾಖೆ ಯ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಅಗ್ನಿ ಶಾಮಕ ದಳ ಬಲಪಡಿಸಲಾಗುತ್ತಿದೆ. ವಿದೇಶದಿಂದ ಉಪಕರಣಗಳನ್ನು ತರಿಸಿಕೊಂಡು ಸಶಸ್ತ್ರ ಘಟಕ ಬಲಪಡಿಸಲಾಗುತ್ತಿದೆ ಎಂದರು.

Home Minister Araga Jnanendra has promised that 10,000 police personnel will be accommodated

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು. ಶಾಸಕ ಪ್ರಸಾದ ಅಬ್ಬಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.

English summary
Home Minister Arag Jnanendra has promised that soon ten thousand police personnel will be accommodated know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X