ಗೋಕುಲ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಸಂಪೂರ್ಣ ನುಜ್ಜುಗುಜ್ಜು, ಚಾಲಕ ಜಸ್ಟ್ ಮಿಸ್

ಹುಬ್ಬಳ್ಳಿ, ಜುಲೈ 18: ಅತಿ ಜೋರಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಕಾರು ಚಾಲಕ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಿನ್ನೆ ತಡ ರಾತ್ರಿ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.

ತಾರಿಹಾಳ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಕಾರು ಗೋಕುಲ್ ರಸ್ತೆಯ ಎರಪೋರ್ಟ್ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರಿನಲ್ಲಿ ಚಾಲಕನನ್ನು ಹೊರತುಪಡಿಸಿ ಯಾರು ಇಲ್ಲದ ಕಾರಣ ನಡೆಯಬಹುದಾದ ದೊಡ್ಡ ದುರಂತ ತಪ್ಪಿದೆ.

Horrible Car Accident At Hubballi Gokul Road

ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿಯನ್ನು ನೀಡಿ ಅಪಘಾತವಾದ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.

ಬೇವಿನ ಮರ ತೆರವಿಗೆ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯರಿಂದ ವಿರೋಧ

ಧಾರವಾಡ : ಮಲ್ಲಸಜ್ಜನ ಶಾಲೆ ಕಾಂಪೌಂಡ್ ಗೋಡೆಗೆ ಹೊಂದಿಕೊಂಡಿರುವ ಬೇವಿನ ಮರವನ್ನು ತೆರವುಗೊಳಿಸಲು ಮುಂದಾದವರ ವಿರುದ್ಧ ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಕಮತಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಕಮಲಾಪುರದ ರಸ್ತೆಯ ಮಲ್ಲಸಜ್ಜನ ಶಾಲೆ ಕಾಂಪೌಂಡ್ ಗೋಡೆ ಬಳಿ ಜಮಾಯಿಸಿದ ಜನರು ಬೇವಿನ ಮರ ತೆರವು ಕಾರ್ಯಚರಣೆ ಮಾಡಿದವರನ್ನು ತರಾಟೆಗೆ ತೆಗೆದುಕೊಂಡರು. ಅನಾವಶ್ಯಕವಾಗಿ ಮರವನ್ನು ತೆರವುಗೊಳಿಸಲಾಗುತ್ತಿದೆ. ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿಲ್ಲ ಈ ರೀತಿ ಏಕಾಏಕಿ ಮರ ತೆರವು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿನಹ: ಕಾರಣ ಮರಗಳನ್ನು ಕಡಿಯಬಾರದು ಎಂದು ಸ್ಥಳೀಯರು ಮರ ತೆರವು ಕಾರ್ಯಚರಣೆಗೆ ಬಂದವರನ್ನು ತರಾಟೆಗೆ ತೆಗೆದುಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+