ಕೊರೊನಾ ಸೋಂಕಿಗೆ ಹೆದರಿ ಕಿಮ್ಸ್ ಆಸ್ಪತ್ರೆಯಲ್ಲಿ ವೃದ್ಧ ಆತ್ಮಹತ್ಯೆ
ಹುಬ್ಬಳ್ಳಿ, ಜೂನ್ 14: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವೃದ್ಧನೋರ್ವ ಚಿಕಿತ್ಸಾ ಕೊಠಡಿಯ ಶೌಚಾಲಯದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವೃದ್ಧನಿಗೆ ಸುಮಾರು 78 ವಯಸ್ಸಾಗಿದ್ದು, ಹುಬ್ಬಳ್ಳಿಯ ರಣದಮ್ಮ ಕಾಲೋನಿಯ ನಿವಾಸಿಯಂದು ಹೇಳಲಾಗಿದೆ. ಹಿಟ್ಟಿನ ಗಿರಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈತನಿಗೆ ಕೆಲವು ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು.

ಈ ಸಮಯದಲ್ಲಿ ವೃದ್ಧನು ಮಾನಸಿಕವಾಗಿ ಭಯಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಜರುಗಿಸಲಿದ್ದಾರೆ
Recommended Video
Sanchari Vijay ಬ್ರೈನ್ ಫೆಲ್ಯೂರ್ ಆಗಿದೆ ಡೆಡ್ ಆಗಿಲ್ಲ ಎಂದು ಡಾಕ್ಟರ್ ಸ್ಪಷ್ಟನೆ | Oneindia Kannada












Click it and Unblock the Notifications