ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶದ್ರೋಹದ ಘೋಷಣೆ: ಹುಬ್ಬಳ್ಳಿಯಲ್ಲಿ ಕಟ್ಟೆಯೊಡೆದ ಆಕ್ರೋಶ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಆಗಸ್ಟ್, 16- ಅಮ್ನೆಸ್ಟಿ ಇಂಟರನ್ಯಾಶನಲ್ ಇಂಡಿಯಾ ಸಂಸ್ಥೆ ಮತ್ತು ಯುನೈಟೆಡ್ ಥೀಯೋಲಾಜಿಕಲ್ ಕಾಲೇಜುಗಳ ಸಹಯೋಗದಲ್ಲಿ ದೇಶದ್ರೋಹ ಚಟುವಟಿಕೆ ನಡೆಸಿದವರನ್ನು ಕೂಡಲೇ ಬಂಧಿಸಬೇಕೆಂದು ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿದ್ದವರನ್ನು ಮತ್ತು ದೇಶ ವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸಿ ತನಿಖೆ ಕೈಗೊಳ್ಳಬೇಕೆಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.[ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ವಿರುದ್ಧ ಎಬಿವಿಪಿ ಬೃಹತ್ ಪ್ರತಿಭಟನೆ]

abvp
Photo Credit:

ನಗರದ ಹಲವಾರು ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳು ಕಿತ್ತೂರು ಚೆನ್ನಮ್ಮಸರ್ಕಲ್ ಗೆ ಆಗಮಿಸಿ ಮೆರವಣಿಗೆ ನಡೆಸಿದರು. ನಂತರ ನಗರದ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
abvp

ಆ.17 ರಂದು ರಾಜ್ಯಾದ್ಯಂತ ಘಟನೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ದೇಶದ್ರೋಹಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಬಿವಿಪಿ ಕಾರ್ಯಕರ್ತರು ಎಚ್ಚರಿಸಿದರು.
abvp

ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ ಬಿದರೆ ನೇತೃತ್ವ ವಹಿಸಿದ್ದರು. ನವೀನಗೌಡ ಪಾಟೀಲ, ಚೇತನಾ, ರೇಖಾ, ತೇಜಸ ಗೋಕಾಕ, ಮಂಜುನಾಥ ಹರ್ತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
abvp
English summary
Hundreds of students and Akhila bharatiya Vidyarthi Parishad ( ABVP) activists organised a rally in Hubballi on 16 August demanding the ban of Amnesty international an NGO which had organised an event related to Kashmir at a city college two days ago and where anti national slogans were raised. They also demanded action against Amnesty International.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X