ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ: ಉಚಿತ ಬಸ್‌ಪಾಸ್, ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಆಗ್ರಹ

ಉಚಿತ ಬಸ್ ಪಾಸ್ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿರುವ ಧೋರಣೆಯನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಹುಬ್ಬಳ್ಳಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬುಧವಾರ ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಎದ

By Basavaraj
|
Google Oneindia Kannada News

ಹುಬ್ಬಳ್ಳಿ. ಜುಲೈ 12 : ಉಚಿತ ಬಸ್ ಪಾಸ್ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿರುವ ಧೋರಣೆಯನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಹುಬ್ಬಳ್ಳಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬುಧವಾರ ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ನಗರದ ಮಹಿಳಾ ವಿದ್ಯಾಪೀಠದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿತು. ಸರ್ಕಾರ ಘೋಷಣೆ ಮಾಡಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಎಲ್ಲ ವರ್ಗಗಳ ಬಡ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

Hubballi: ABVP staged protest for demanding free bus pass to all students

ಈಗಾಗಲೇ ಜಾರಿಗೊಳಿಸಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಗೆ ನಮ್ಮ ವಿರೋಧವಿಲ್ಲ. ಬದಲಾಗಿ ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ.

ಆದರೆ, ಇತರ ಸಮುದಾಯಗಳಲ್ಲಿಯೂ ಬಡ ವಿದ್ಯಾರ್ಥಿಗಳಿದ್ಧಾರೆ. ಅವರಿಗೆ ಬಸ್‌ ಪಾಸ್ ಹಣವನ್ನು ಭರಿಸಲಾಗದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಕೂಡಲೇ ತಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಕಾರರು ಎನ್‌ಡಬ್ಲೂಕೆಆರ್ ಟಿಸಿ ಚೇರಮನ್ ಸದಾನಂದ ಡಂಗನವರ ಅವರ ಮೂಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

English summary
Some collages students’ have staged protest in association with ABVP for demanding to implement free bus pass for all students irrespective of caste along with SC, ST. Hundreds of students were gathered at NWKRTC central office and submitted the memorandum to chairman Sadananda Danganavar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X