Hubballi Airport: ಸಮೀಕ್ಷೆಯಲ್ಲಿ ದೇಶದ ಟಾಪ್ 5ನೇ ಸ್ಥಾನಕ್ಕೇರಿದ ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿಯವರಿಂದ ಇತ್ತೀಚೆಗಷ್ಟೇ ಮಹತ್ವದ ಯೋಜನೆಗೆ ಶಂಕುಸ್ಥಾಪನೆ ಕಂಡ ವಾಣಿಜ್ಯ ನಗರವಾದ ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣವು (Hubli airport) ದೇಶದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಹೌದು, ಛೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದ ಎಲ್ಲ ವಿಮಾನ ನಿಲ್ದಾಣಗಳ ಪೈಕಿ ಟಾಪ್ 5 ಗರಿ ಸಂದಿದೆ. ಜಗತ್ತಿನ ಭೂಪಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತನ್ನದೇ ಆದ ದಾಖಲೆ ಮಾಡಿರುವುದು ಈ ಭಾಗದವರಿಗೆ ಹೆಮ್ಮೆ ತಂದಿದೆ.

Hubballi Airport got Top 5 Place in Customer Satisfaction Index

ಭಾರತದ 58 ವಿಮಾನ ನಿಲ್ದಾಣಗಳನ್ನು ಈ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ಪರಿಗಣಿಸಲಾಗಿತ್ತು. ಅದರಲ್ಲಿ ಟಾಪ್ 5ನೇ ಸ್ಥಾನವನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣವು ಪಡೆದುಕೊಂಡಿದೆ. ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನ ಸೆಳೆಯುವಲ್ಲಿ ಹುಬ್ಬಳ್ಳಿ ಯಶಸ್ವಿಯಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣವು 1974ರಲ್ಲಿ ನಿರ್ಮಾಣಗೊಂಡಿದ್ದು, ಸದ್ಯ ಈ ಏರ್‌ಪೋರ್ಟ್ ಸುವರ್ಣ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿದೆ. ಹೀಗಿರುವಾಗಲೇ ಈಗ 'ಗ್ರಾಹಕರ ಸಂತೃಪ್ತಿ ಸಮೀಕ್ಷೆ'ಯಲ್ಲಿ ದೇಶದಲ್ಲೇ ಟಾಪ್​ 5ನೇ ಸ್ಥಾನ ಪಡೆದುಕೊಂಡಿದೆ.

Hubballi Airport got Top 5 Place in Customer Satisfaction Index

320 ಕೋಟಿ ರೂ. ಕಾಮಗಾರಿ ಆರಂಭ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 320 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಆರಂಭಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಮುಂದಿನ ಕೆಲವೇ ವರ್ಷಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವು ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುಲಿದೆ.

ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ- ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸಲು ಸಾಕಷ್ಟು ಶ್ರಮಿಸಿದ್ದಾರೆ.

ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ ಎಂದರು.

ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ವಿವಿಧೆಡೆ ಇಲ್ಲಿಂದ ವಿಮಾನ ಸೌಲಭ್ಯ

ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದೆ. ಇಲ್ಲಿಂದ ನೀವು ದೆಹಲಿ, ಬೆಂಗಳೂರು, ಹೈದ್ರಾಬಾದ್, ಮುಂಬೈ, ಚೆನ್ನೈ ಮುಂತಾದ ನಗರಗಳಿಗೆ ವಿಮಾನಯಾನ ಮಾಡಬಹುದು. ಇಂಡಿಗೋ, ಸ್ಪೇಸ್ ಜೆಟ್​, ಏರ್​ಇಂಡಿಯಾ, ಅಲಯನ್ಸ್​ ಏರ್​ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿವೆ. ಇತ್ತೀಚಿನ ಕೆಲ ವರ್ಷಗಳಿಂದ ಕಾಗೋರ್ ಸೇವೆ ಸಹ ಇಲ್ಲಿ ಆರಂಭಿಸಲಾಗಿದೆ.

ನಿತ್ಯ ಕನಿಷ್ಠ 15 ವಿಮಾನ ಹಾರಾಟ

ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ವಿಮಾನಯನ ಮೂಲಕ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ವಾಣಿಜ್ಯ ನಗರಿಗೆ ಬಂದಿಳಿದು ಹಾರಾಟ ನಡೆಸಿವೆ. ಸಾವಿರಾರು ಪ್ರಯಾಣಿಕರು ಸುಖಕರ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ ತಿಳಿಸಿದ್ದಾರೆ.

ಹುಬ್ಬಳ್ಳಿ ಏರ್‌ಪೋರ್ಟ್ ಟಾಪ್ ಐದನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿಯಾಗಿದೆ. ಈ ಮನ್ನಣೆ ಪಡೆಯಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ರೂಪೇಶ್ ಕುಮಾರ್ ಮತ್ತು ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+